ಕೃಷಿ ಪತ್ತಿನ ಸಹಕಾರ ಸಂಘ ಪದಾಧೀಕಾರಿಗಳ ಅವಿರೋಧ ಆಯ್ಕೆ

ಹನೂರು: ಏ.04: ಕೃಷಿ ಪತ್ತಿನ ಉಪಾಧ್ಯಕ್ಷರು, ನಿರ್ದೇಶಕರುಗಳ ವಿಶ್ವಾಸ ಗಳಿಸಿ ಸಂಘದ ಬೆಳವಣಿಗೆಗೆ ಶ್ರಮಿಸಲಾಗುವುದು ಎಂದು ಕಾಮಗೆರೆ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷ ಬೇಕರಿ ಸಿ.ರವಿ ತಿಳಿಸಿದರು.
ಇಂದು ಹನೂರು ಕ್ಷೇತ್ರ ವ್ಯಾಪ್ತಿಯ ಕಾಮಗೆರೆ ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಪದಾಧೀಕಾರಿಗಳ ಅವಿರೋಧ ಆಯ್ಕೆ ಪ್ರಕ್ರಿಯೆ ಕಾರ್ಯಕ್ರಮದ ನಂತರ ಮಾತನಾಡಿದರು.
ಎಲ್ಲಾ ಸಮುದಾಯದ ಜನತೆ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಇದ್ದು, ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸಂಘದ ಅಭಿವೃದ್ಧಿಗೆ ಮುಂದಾಗುತ್ತೇನೆ. ನನ್ನ ಮೇಲೆ ವಿಶ್ವಾಸವಿಟ್ಟು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ದಿ.ಹೆಚ್.ನಾಗಪ್ಪ ಕುಟುಂಬದವರು ಹಾಗೂ ಎಲ್ಲಾ ನಿರ್ದೇಶಕರುಗಳಿಗೆ ಅಭಾರಿಯಾಗಿದ್ದೇನೆ ಎಂದರು.
ಉಪಾಧ್ಯಕ್ಷ ಎನ್.ಮಹಾದೇವ ಮಾತನಾಡಿ, ಸಂಘವು ತೀರ ಹಿಂದುಳಿದಿದ್ದು, ಮುಂದಿನ ಅವಧಿಯಲ್ಲಿ ಅಧ್ಯಕ್ಷರು ನೇತೃತ್ವದಲ್ಲಿ ಅಭಿವೃದ್ಧಿ ಪಥದತ್ತ ಸಾಗಲಿ ಎಂದು ತಿಳಿಸಿದರು.
ಸಹಕಾರ ಅಭಿವೃದ್ಧಿ ಅಧಿಕಾರಿ ಪದ್ಮನಾಭ ಚುನಾವಣೆ ಪ್ರಕ್ರಿಯೆಯನ್ನು ನಡೆಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪುಟ್ಟಅರಸು ಅವರು ನಡೆಸಿಕೊಟ್ಟರು. ಇದೇ ವೇಳೆ ನೂತನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಸೇರಿದಂತೆ ನಿರ್ದೇಶಕರುಗಳನ್ನು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ನಿರ್ದೇಶಕರುಗಳಾದ ರವಿ, ಮಹಾದೇವಪ್ಪ, ಶಿವಣ್ಣ, ಶಿವಮಲ್ಲೇಗೌಡ, ನಾಗರಾಜು, ಗವಿಸಿದ್ದಮ್ಮ,ಸದಸ್ಯರುಗಳು ಇದ್ದರು.