ಕೃಷ್ಣಾನಗರ ಗ್ರಾ.ಪಂ ಅಧ್ಯಕ್ಷರಾಗಿ ರೇಣುಕಮ್ಮ ಆಯ್ಕೆ


ಸಂಜೆವಾಣಿ ವಾರ್ತೆ
ಸಂಡೂರು: ಆ: 6: ತಾಲೂಕಿನ ಕೃಷ್ಣಾನಗರ ಗ್ರಾಮಪಂಚಾಯಿತಿ ನೂತನ ಅಧ್ಯಕ್ಷರಾಗಿ ರೇಣುಕಾ ಗಂಡ ದೇವೇಂದ್ರಪ್ಪ 2ನೇ ಅವಧಿಗೆ ಅಧ್ಯಕ್ಷರಾಗಿ ಕೇವಲ ಒಂದು ನಾಮಪತ್ರ ಸಲ್ಲಿಕೆಯಾಗಿದ್ದು ಅವರು ಅವಿರೋಧವಾಗಿ ಆಯ್ಕೆಯಾದ್ದಾರೆ ಎಂದು ಚುನಾವಣಾಧಿಕಾರಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಎನ್.ಕೆ.ವೆಂಕಟೇಶ್ ಘೋಷಿಸಿದರು.
ಅಧ್ಯಕ್ಷ ಹುದ್ದೆಯು ಅನುಚೂಚಿತ ಮಹಿಳೆಗೆ ಮೀಸಲಾತಿ ಘೋಷಣೆಯಾಗಿತ್ತು, ಹಾಗೂ ಉಪಾಧ್ಯಕ್ಷ ಹುದ್ದೆಗೆ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು ಅಶೀಯಾ ಬಿ. ಗಂಡ ಎಂ.ಕೆ. ಅದಿಲ್ ಭಾಷಾ ಇವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ಸಂದರ್ಭದಲ್ಲಿ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಸಿಬ್ಬಂದಿ ವರ್ಗದವರು, ಗ್ರಾಮಪಂಚಾಯಿತಿಯ ಎಲ್ಲಾ ಸದಸ್ಯರುಗಳು, ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.