ಕೃಷ್ಣಾ ನದಿಗೆ ನೀರು ಬಿಡಲು ಶ್ರೀಮಂತ ಪಾಟೀಲರಿಂದ ಪಡ್ನವೀಸ್ ಗೆ ಮನವಿ

ಕಾಗವಾಡ :ಎ.26: ಕೃಷ್ಣಾ ನದಿಯಲ್ಲಿ ದಿನದಿಂದ
ದಿನಕ್ಕೆ ನೀರು ಕಡಿಮೆಯಾಗುತ್ತಿದ್ದು, ತಕ್ಷಣ 2 ರಿಂದ 3 ಟಿಎಂಸಿ ನೀರು ಬಿಡುಗಡೆಗೊಳಿಸಬೇಕು ಎಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವ ದೇವೇಂದ್ರ ಫಡ್ನವೀಸ್ ಅವರಿಗೆ ಕಾಗವಾಡ ಬಿಜೆಪಿ ಅಭ್ಯರ್ಥಿ ಶ್ರೀಮಂತ ಪಾಟೀಲ ಮಂಗಳವಾರ ಮನವಿ ಮಾಡಿದರು. ಅವರು ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ ಅವರು, ಕೃಷ್ಣಾನದಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿ ಚಿಕ್ಕೋಡಿ, ಕಾಗವಾಡ, ಅಥಣಿ, ರಾಯಬಾಗ, ಕುಡಚಿ ಈ ತಾಲೂಕುಗಳಲ್ಲಿ ಕುಡಿಯುವ ನೀರಿನ ಕೊರತೆ ಉಂಟಾಗಬಹುದು. ಹೀಗಾಗಿ ತಕ್ಷಣ ಮಹಾರಾಷ್ಟ್ರ ಸರ್ಕಾರ ಕೊಯ್ನಾ / ವಾರಣಾ ಡ್ಯಾಂನಿಂದ ಕೃಷ್ಣಾ ನದಿಗೆ 2 ರಿಂದ 3 ಟಿಎಂಸಿ ನೀರು ತಕ್ಷಣ ಬಿಡುವಂತೆ ವಿನಂತಿಸಿದರು.
ಮನವಿಗೆ ಸ್ಪಂದಿಸಿ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮಾತನಾಡಿ ಕರ್ನಾಟಕದ ಕೃಷ್ಣಾ ನದಿ ವ್ಯಾಪ್ತಿಯಲ್ಲಿ ನೀರಿನ ಮಟ್ಟ ಕಡಿಮೆಯಾಗಿರುವ ವಿಷಯ ನನ್ನ ಗಮನಕ್ಕೂ ಬಂದಿದೆ. ಹೀಗಾಗಿ ನಾನು ಇಲ್ಲಿಂದ ಮುಂಬೈಗೆ ತೆರಳಿದ ನಂತರ ತಕ್ಷಣ 2 ಟಿಎಂಸಿ ನೀರು ಬಿಡಲು ಕ್ರಮ ಕೈಗೊಳ್ಳುವೆ ಎಂದು ಭರವಸೆ ನೀಡಿದರು.