ಕೃಷ್ಣಾ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ವಿಜಯಪುರ,ನ.15-ಕೃಷ್ಣಾ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೊಲ್ಹಾರ ಪಟ್ಟಣದ ಕೃಷ್ಣಾ ನದಿ ಸೇತುವೆ ಬಳಿ ಈ ಘಟನೆ ನಡೆದಿದೆ. ಕೊಲ್ಹಾರ ತಾಲ್ಲೂಕಿನ ಮಟ್ಟಿಹಾಳ ಗ್ರಾಮದ ಶಾಂತವ್ವ ಬಸಪ್ಪ ಜಂಬಗಿ (35) ಆತ್ಮಹತ್ಯೆ ಮಾಡಿಕೊಂಡ ಮಹಿಳೆ. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಮನನೊಂದು ನದಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲ್ಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.