ಕೆಂಡದ `ಧೂಳು’ ಲಿರಿಕಲ್ ವೀಡಿಯೋ  ಬಿಡುಗಡೆ

ರೂಪಾ ರಾವ್ ನಿರ್ಮಾಣ ಮತ್ತು ಸಹದೇವ್ ಕೆಲವಡಿ ನಿರ್ದೇಶನದಲ್ಲಿ ಮೂಡಿ ಬಂದಿರುವ `ಕೆಂಡ’ ಚಿತ್ರದ ಲಿರಿಕಲ್ ಹಾಡು ಬಿಡುಡಗೆಯಾಗಿದೆ.

ಸಂಪೂರ್ಣವಾಗಿ ಚಿತರ್ರೀಕರಣ ಮುಗಿಸಿಕೊಂಡು ಬಿಡುಗಡೆಗೆ ಸಜ್ಜುಗೊಂಡಿದೆ. `.ದಾರಿಯಲ್ಲಿ ಧೂಳು… ದೂರ ಎಲ್ಲೋ ಊರು… ಅಂತ ತೆರೆದುಕೊಳ್ಳೋ ಈ ಹಾಡು ನವಿರು ಸಾಹಿತ್ಯ, ಅದಕ್ಕೊಪ್ಪುವ ಸಂಗೀತ ಹಾಗೂ ಧ್ವನಿಯೊಂದಿಗೆ ಮೆಲ್ಲಗೆ ಮನಸಿಗಿಳಿಯುವಂತಿದೆ.  ರಿತ್ವಿಕಕ್ ಕಾಯ್ಕಿಣಿ ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿರುವ ಈ ಹಾಡನ್ನು ಸಂಗೀತ ನಿರ್ದೇಶಕ ಚರಣ್ ರಾಜ್ ಹಾಡಿದ್ದಾರೆ.

ಜಯಂತ್ ಕಾಯ್ಕಿಣಿ ಹಾಡಿಗೆ ಸಾಹಿತ್ಯ ಬರೆದಿದ್ದಾರೆ. ಪುತ್ರ ರಿತ್ವಿಕ್ ಮೆಲುವಾದ ಸಂಗೀತ  ನೀಡಿದ್ದಾರೆ. ಮೊದಲ ಹಾಡಿನ ಮೂಲಕ ಗಮನ ಸೆಳೆದಿದ್ದ ರಿತ್ವಿಕ್ ಕಾಯ್ಕಿಣಿ, ಎರಡನೇ ಈ ಹಾಡಿನ ಮೂಲಕ ಮತ್ತಷ್ಟು ಭರವಸೆ ಮೂಡಿಸಿದ್ದಾರೆ. ಕೆಂಡ ಇದೇ ಜೂನ್ ತಿಂಗಳಿನಲ್ಲಿ ಬಿಡುಗಡೆಗೊಳ್ಳಲಿದೆ.

ಈಗಾಗಲೇ ಗಂಟುಮೂಟೆ ಚಿತ್ರದ ಮೂಲಕ ನಿರ್ದೇಶಕಿಯಾಗಿ ನೆಲೆ ಕಂಡುಕೊಂಡಿರುವ ರೂಪಾ ರಾವ್. ಕೆಂಡದ ಮೂಲಕ ನಿರ್ಮಾಪಕಿಯಾಗಿ ರೂಪಾಂತರಗೊಂಡಿದ್ದಾರೆ. ಗಂಟುಮೂಟೆಯ ಭಾಗವಾಗಿದ್ದ ಸಹದೇವ್ ಕೆಲವಡಿ ಕೆಂಡದೊಂದಿಗೆ ಸ್ವತಂತ್ರ ನಿರ್ದೇಶಕರಾಗಿದ್ದಾರೆ.