ಕೆಂಡದ ಸೆರಗು ಚಿತ್ರದ ಎರಡನೇ ಹಾಡು ಬಿಡುಗಡೆ

ಸ್ಯಾಂಡಲ್‍ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಚಿತ್ರ ಬಿಡುಗಡೆಗೆ ಸಜ್ಜಾಗಿದೆ. ಕಾದಂಬರಿ ಆಧಾರಿತ ಚಿತ್ರ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ಸ್ ಕೆಲಸದಲ್ಲಿ ಬ್ಯುಸಿಯಾಗಿದೆ.

ಪಿ ಆರ್‍ಓ ಕಮ್  ಯುವ ನಟ ಹರೀಶ್ ಅರಸು ಹಾಗೂ ಪೂರ್ಣಿಮಾ ಹೆಜ್ಜೆ ಹಾಕಿರುವ ಎರಡನೇ ಹಾಡು ಬಿಡುಗಡೆಯಾಗಿದೆ.ಕೆಂಡದ ಸೆರಗು’ ಚಿತ್ರವನ್ನು ನಿರ್ದೇಶಿಸಿರುವ ರಾಕಿ ಸೋಮ್ಲಿ “ಈ ಹುಡುಗಿ ಎಷ್ಟು ಚೆಂದ” ಹಾಡಿಗೆ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಕಂಠ ಕುಣಿಸಿದ್ದು, ವೀರೇಶ್ ಕಬ್ಲಿ ಟ್ಯೂನ್ ಹಾಕಿದ್ದಾರೆ.

ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ  ಪೊಲೀಸ್  ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.

ಕೆ. ಕೊಟ್ರೇಶ್ ಗೌಡ ಚಿತ್ರ ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತವಿದೆ.