ಕೆಆರ್‍ಎಸ್ ರಸ್ತೆಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತ: ಓರ್ವ ಮಹಿಳೆ ಮೃತ

ಸಂಜೆವಾಣಿ ನ್ಯೂಸ್
ಮೈಸೂರು.ಮೇ.17:- ಕಾರ್ ಹಾಗೂ ದ್ವಿಚಕ್ರವಾಹನ ನಡುವೆ ಇಂದು ಬೆಳಿಗ್ಗೆ ಸಂಭವಿಸಿದ ಅಪಘಾತದಲ್ಲಿ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ನಡೆದಿದೆ.
ಈ ಅಪಘಾತದಲ್ಲಿ ಮೃತಪಟ್ಟ ಮಹಿಳೆಯನ್ನು ರಾಧಾ (34) ಎಂದು ಗುರುತಿಸಲಾಗಿದೆ.ಬೆಳಗ್ಗೆ 6 ಗಂಟೆಗೆ ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿ ಕಾರು ಮತ್ತು ಸ್ಕೂಟರ್ ನಡುವೆ ಅಪಘಾತವಾಗಿದ್ದು, ಸ್ಥಳದಲ್ಲೆ ರಾಧಾ ಅವರು ಮೃತಪಟ್ಟಿದ್ದಾರೆ. ಅಪಘಾತದ ಬಗ್ಗೆ ಮಾಹಿತಿ ಪಡೆದ ವಿವಿಪುರಂ ಸಂಚಾರಿ ಠಾಣೆ ಪೆÇಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.