ಕೆಎಂಎಫ್ ಅಧಿಕಾರಿಗಳಿಗೆ ಶಾಸಕ ತರಾಟೆ ಸ್ಥಳೀಯರಿಗೆ ಉದ್ಯೋಗಕ್ಕೆ ಸೂಚನೆ

ಸಂಜೆವಾಣಿ ವಾರ್ತೆ
ಗಂಗಾವತಿ, ಸೆ.29: ಕೊಪ್ಪಳ ತಾಲೂಕಿನ ಬುದುಗುಂಪಾ ಗ್ರಾಮದ ವ್ಯಾಪ್ತಿಯಲ್ಲಿ ಬರುವ ಕೆಎಂಎಫ್ ಘಟಕ್ಕೆ ಭೇಟಿ ನೀಡಿದ ಶಾಸಕ ಪರಣ್ಣ ಮುನವಳ್ಳಿ ಸ್ಥಳೀಯ ಯುವಕರಿಗೆ ಉದ್ಯೋಗದಲ್ಲಿ
ಆಧ್ಯತೆ ನೀಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಮಂಗಳವಾರ ಕೆಎಂಎಫ್‍ಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುತ್ತಲಿನ ಗ್ರಾಮದ ಯುವಕರು ಮತ್ತಿತರು ಶಾಸಕರನ್ನು ಭೇಟಿ ಮಾಡಿ ಕೆಎಂಎಫ್‍ನಲ್ಲಿ ಸ್ಥಳೀಯರನ್ನು ಕಡೆಗಣಿಸಲಾಗುತ್ತಿದೆ. ಇಲ್ಲಿನ ಅಧಿಕಾರಿಗಳು ನಿರ್ಲಕ್ಷ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಜನರ ಆರೋಪವನ್ನು ಆಲಿಸಿದ ಶಾಸಕ ಪರಣ್ಣ ಮುನವಳ್ಳಿ ಘಟಕದಲ್ಲಿರುವ ಉದ್ಯೋಗಿಗಳ ಮಾಹಿತಿ ಪಡೆದು ಕೆಲವೊಂದು ಲೋಪಗಳ ಬಗ್ಗೆ ತರಾಟೆಗೆ ತೆಗೆದುಕೊಂಡರು.
ಮತ್ತು ಸ್ಥಳೀಯ ಜನರಿಗೆ ಉದ್ಯೋಗ ನೀಡಲು ಮೊದಲ ಆಧ್ಯತೆ ನೀಡಬೇಕು. ಇದರ ವಿರುದ್ಧವಾಗಿ ನಡೆದುಕೊಂಡರೆ ಸರಕಾರದ ಗಮನಕ್ಕೆ ತರಲಾಗುತ್ತದೆ. ಮತ್ತು ಘಟಕದಲ್ಲಿ ವ್ಯವಸ್ಥೆ ಲೋಪವಾಗದಂತೆ ನಿಗಾವಹಿಸಬೇಕು ಎಂದು ಸೂಚಿಸಿದರು. ಅಧಿಕಾರಿಗಳು ಶಾಸಕರ ಸೂಚನೆಗೆ ಒಪ್ಪಿಗೆ ಸೂಚಿಸಿದರು. ಜನರು ಶಾಸಕರ ನಿರ್ಧಾರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.