ಕೆಎಸ್ಆರ್ಟಿಸಿ ಬಸ್ ಕಾರಿಗೆ ಡಿಕ್ಕಿಮೂವರು ದುರ್ಮರಣ

ಯಾದಗಿರಿ,ಮೇ.4- ಕೆಎಸ್ಆರ್ಟಿಸಿ ಬಸ್ ಹಾಗೂ ಕಾರು ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶಹಾಪುರ ತಾಲೂಕಿನ ಮದ್ದರಕಿ ಗ್ರಾಮದ ಬಳಿ ಅಪಘಾತ ಸಂಭವಿಸಿದೆ.
ಸುರಪುರ ತಾಲೂಕಿನ ರಂಗಂಪೇಟೆ ನಿವಾಸಿಗಳಾದ ನಾಗರಾಜು ಸಜ್ಜನ್(59), ಮಹಾದೇವಿ(50), ರೇಣುಕಾ(45) ಮೃತಪಟ್ಟವರು.
ಮೃತ ನಾಗರಾಜು ಸಜ್ಜನ್ ಕೃಷಿ ಇಲಾಖೆಯಲ್ಲಿ ಅಧಿಕಾರಿಯಾಗಿದ್ದರು. ಕಲಬುರಗಿಯಲ್ಲಿ ಸಂಬಂಧಿಕರ ಮದುವೆ ಮುಗಿಸಿ ಹಿಂದಿರುಗುವಾಗ ಘಟನೆ ಜರುಗಿದೆ. ಕೆಎಸ್​ಆರ್​ಟಿಸಿ ಬಸ್​ನಲ್ಲಿದ್ದ ಐದಾರು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಬಸ್​ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೀಮರಾಯನಗುಡಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.