ಕೆಎಸ್​ಆರ್​ಟಿಸಿ ಬಸ್ ಪಲ್ಟಿ ಪ್ರಯಾಣಿಕರು ಪಾರು

ಮಡಿಕೇರಿ,ಸೆ.4- ಕೆಎಸ್​ಆರ್​ಟಿಸಿ ಬಸ್​ ಅಪಘಾತಕ್ಕೀಡಾಗಿರುವ ಘಟನೆ ನಗರದ ಸಮೀಪದ ಬೋಯಿಕೇರಿ ತಿರುವಿನಲ್ಲಿ ನಡೆದಿದೆ.
ಮಡಿಕೇರಿಯಿಂದ ಮೈಸೂರು ತೆರಳುತ್ತಿದ ಬಸ್ ಹಾಗೂ ಮಡಿಕೇರಿ ಕಡೆ ಬರುತ್ತಿದ್ದ ಬೈಕ್ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕೆಎಸ್​ಆರ್​ಟಿಸಿ ಬಸ್​ ರಸ್ತೆ ಪಕ್ಕಕ್ಕೆ ಪಲ್ಟಿಯಾಗಿದೆ. ಅದೃಷ್ಟವಶಾತ್ ಬಸ್​ನಲ್ಲಿದ್ದ 21 ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಇನ್ನು ಬೈಕ್​ ಸವಾರನಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.
ಮಡಿಕೇರಿ ಗ್ರಾಮಂತರ ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.