ಕೆಎಸ್‌ಕೆ ಕ್ಷೇತ್ರ ಸಂಚಾರ ಪ್ರಚಾರ ಕಾರ್ಯ

ಚಿಕ್ಕನಾಯಕನಹಳ್ಳಿ, ಆ. ೬- ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ತಾಲ್ಲೂಕಿನ ಮರೆನಡು ಗ್ರಾಮದ ಶ್ರೀ ಈಶ್ವರ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸುವ ಮೂಲಕ ಮುಂದಿನ ಚುನಾವಣೆಗಾಗಿ ಕ್ಷೇತ್ರ ಸಂಚಾರದ ಪ್ರಚಾರಕ್ಕೆ ಚಾಲನೆ ನೀಡಿದರು.
ಚಿಕ್ಕನಾಯಕಮಹಳ್ಳಿ ಕ್ಷೇತ್ರದಿಂದ ಬಿಜೆಪಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ರಾಜ್ಯ ಜೈವಿಕ ಇಂಧನ ಅಭಿವೃದ್ದಿ ಮಂಡಳಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಕೆ.ಎಸ್. ಕಿರಣ್ ಕುಮಾರ್ ರವರು ಬರುವ ವಿಧಾನಸಭಾ ಚುನಾವಣೆಗಾಗಿ ಕ್ಷೇತ್ರ ಪ್ರಚಾರಕ್ಕೆ ಮರೆನಡು ಗ್ರಾಮದ ಈಶ್ವರ ದೇವಾಲಯಕ್ಕೆ ಕುಟುಂಬ ಸಮೇತವಾಗಿ ತೆರಳಿ ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಪೂಜೆ ಸಲ್ಲಿಸಿದ ನಂತರ ಅವರು ನೆರೆದಿದ್ದ ಅಭಿಮಾನಿಗಳನ್ನುದ್ದೇಶಿ ಮಾತನಾಡಿ, ಬಿಜೆಪಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಶಾಸಕನಾಗಿ ಪಕ್ಷದ ಧ್ಯೇಯ, ಸಿದ್ದಾಂತಗಳ ನೆಲೆಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಾ ಬಂದಿರುವ ನನಗೆ ಈ ಕ್ಷೇತ್ರದಿಂದ ಬರುವ ವಿಧಾನಸಭಾ ಚುನಾವಣೆಗೆ ಪಕ್ಷದಿಂದ ಟಿಕೆಟ್ ದೊರೆಯುವ ವಿಶ್ವಾಸವಿದೆ. ಜತೆಗೆ ಕ್ಷೇತ್ರದಲ್ಲಿ ಎಲ್ಲ ಜನಾಂಗದ ಪ್ರೀತಿಯ ಬೆಂಬಲದ ಮಹಾಪೂರವೇ ಇದ್ದು ಗೆಲುವು ನಮ್ಮ ಪರವಾಗಿದೆ ಎಂದರು.
ಈ ಕ್ಷೇತ್ರದಲ್ಲಿ ಹಣಬಲ ಹಾಗೂ ಜನಬಲದ ನಡುವೇಯೇ ಈ ಬಾರಿ ಸ್ಪರ್ಧೆಯಿದ್ದು, ಕ್ಷೇತ್ರದಾದ್ಯಂತ ಸಂಚರಿಸಿ ಜನರನ್ನು ಸಂಪರ್ಕಿಸಿ ಅವರ ವಿಶ್ವಾಸವನ್ನು ಭದ್ರಪಡಿಸಲಾಗುವುದು ಎಂದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.