ಕೆಎಸ್‌ಆರ್‌ಟಿಸಿ ನೌಕರರ ಮಾರ್ಚ್ ತಿಂಗಳ ವೇತನಕ್ಕೆ ತಡೆ

ಬೆಂಗಳೂರು,ಏ.೭-ಆರನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಬಸ್ ಸಂಚಾರ ಸ್ಥಗಿತಗೊಳಿಸಿರುವ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್‌ಆರ್ ಟಿಸಿ) ನೌಕರರ ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ರಾಜ್ಯ ಸರ್ಕಾರ ಮುಂದಾಗಿದೆ.
ಬಸ್ ಸಂಚಾರ ಸ್ಥಗಿತಗೊಳಿಸಿ ಮುಷ್ಕರ ನಡೆಸುತ್ತಿರುವ ಸಾರಿಗೆ ಸಂಸ್ಥೆ ನೌಕರರಿಗೆ ಪಾಠ ಕಲಿಸಲು ಮಾರ್ಚ್ ತಿಂಗಳ ವೇತನ ತಡೆ ಹಿಡಿಯಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.
ಸಾರಿಗೆ ನೌಕರರ ಮಾರ್ಚ್ ತಿಂಗಳ ವೇತನ ತಡೆಹಿಡಿಯಲು ರಾಜ್ಯ ಸರ್ಕಾರ ಮುಂದಾಗಿ ನಾಲ್ಕು ಸಾರಿಗೆ ನಿಗಮಗಳಿಗೆ ಸೂಚನೆ ನೀಡಿದೆ.
ಸರ್ಕಾರದ ಮನವಿಯನ್ನು ತಿರಸ್ಕರಿಸಿ ಮುಷ್ಕರ ನಡೆಸಿ ಜನರಿಗೆ ತೊಂದರೆಯುಂಟು ಮಾಡಿರುವುದಕ್ಕೆ ಪ್ರತಿಯಾಗಿ ಸಾರಿಗೆ ನೌಕರರ ವೇತನ ತಡೆ ಹಿಡಿಯಲು ನಿರ್ಧಾರ ಕೈಗೊಳ್ಳಲಾಗಿದೆ.
ಕೊರೊನಾದಿಂದ ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಸಾರಿಗೆ ಸಂಸ್ಥೆಗಳು ನಷ್ಟಕ್ಕೆ ಗುರಿಯಾಗಿ ನೌಕರರಿಗೆ ವೇತನ ನೀಡಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ಸರ್ಕಾರ ಹಣ ನೀಡಿ ವೇತನಕ್ಕೆ ವ್ಯವಸ್ಥೆ ಮಾಡಿತ್ತು.