ಕೆಎಸ್ ಆರ್ ಟಿಸಿ- ಖಾಸಗಿ ಬಸ್ ಚಾಲಕರ ನಡುವೆ ವಾಗ್ವಾದ

ದಾವಣಗೆರೆ.ಏ.೧೯; ಪ್ರಯಾಣಿಕರನ್ನು ಕರೆದೊಯ್ಯುವ ವಿಚಾರಕ್ಕೆ ಸಂಬಂಧಿಸಿದಂತೆ ಕೆಎಸ್ ಆರ್ ಟಿಸಿ ನೌಕರರು ಹಾಗೂ ಖಾಸಗಿ ಬಸ್ ಚಾಲಕರ ನಡುವೆ ವಾಗ್ವಾದ ನಡೆದಿದೆ.ನಗರದ ಹೈಸ್ಕೂಲ್ ಮೈದಾನದ ಬಳಿ ತಾತ್ಕಾಲಿಕವಾಗಿ ನಿರ್ಮಾಣವಾಗಿರುವ ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಬಳಿ ಇಂದು ಬೆಳಗ್ಗೆ ಬೆಂಗಳೂರಿಗೆ ತೆರಳುವ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಖಾಸಗಿ ಬಸ್ ನವರು ಮಾರ್ಗದ ಪರ್ಮಿಟ್ ಹೊಂದಿದ್ದರೂ ಸಹ ಕೆಎಸ್ ಆರ್ ಟಿಸಿಯವರು ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದಾರೆ.ಎಷ್ಟು ಪ್ರಯಾಣಿಕರಿರುತ್ತಾರೋ ಅಷ್ಟೇ ಜನರನ್ನು ಕರೆದೊಯ್ಯುತ್ತಾರೆ.ಇದರಿಂದ ನಮಗೆ ಅನ್ಯಾಯವಾಗುತ್ತಿದೆ ಎಂದು ಖಾಸಗಿ ಬಸ್ ಚಾಲಕರು ಹೇಳಿದ್ದಾರೆ.ನಮಗೂ ಸಂಚರಿಸಲು ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಆರ್ ಟಿಒ ಶ್ರೀಧರ್ ಕೆ.ಮಲ್ಲಾಡ್ ಹಾಗೂ ಕೆಎಸ್ ಆರ್ ಟಿಸಿ ಡಿಸಿ ಸಿದ್ದೇಶ್ವರ್ ಎನ್ ಹೆಬ್ಬಾಳ್ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.ಈ ವೇಳೆ ಮಾತನಾಡಿದ ಕೆಎಸ್ ಆರ್ ಟಿಸಿ ಡಿಸಿ ಸಿದ್ದೇಶ್ವರ್ ಅವರು 6ನೇ ವೇತನ ಆಯೋಗದ ಅನ್ವಯ ವೇತನ ಹೆಚ್ಚಳಕ್ಕೆ ಆಗ್ರಹಿಸಿ ನಡೆಯುತ್ತಿರುವ ಸಾರಿಗೆ ನೌಕರರ ಮುಷ್ಕರ 13ನೇ ದಿನಕ್ಕೆ ಕಾಲಿಟ್ಟಿದೆ. ಇಂದು ಸಾರಿಗೆ ನೌಕರರು ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ ಈ ಹಿನ್ನೆಲೆಯಲ್ಲಿ  ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ಬಸ್ ನಿಲ್ದಾಣದ ಸುತ್ತಲೂ ಪೊಲೀಸ್ ಇಲಾಖೆಯವರು ಬಿಗಿಭದ್ರತೆ ಕೈಗೊಂಡಿದ್ದಾರೆ.ಮುಷ್ಕರದ ಮಧ್ಯೆ ಜಿಲ್ಲೆಯಲ್ಲಿ ಇಂದು ೪೦ ಬಸ್ ಗಳು ಕಾರ್ಯಾಚರಣೆ ನಡೆಸಿವೆ. ೬೦ ಸಿಬ್ಬಂದಿ ಕೆಲಸಕ್ಕೆ ಹಾಜರಾಗಿದ್ದಾರೆ ಎಂದರು ತಿಳಿಸಿದರು.