
ಬೀದರ್:ಸೆ.5: ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯಿಂದ (ಕೆಕೆಆರ್‍ಡಿಬಿ) ಜಿಲ್ಲೆಗೆ ಹೆಚ್ಚಿನ ಅನುದಾನ ಬರಲಿದೆ. ಒಟ್ಟು ?380 ಕೋಟಿ ಕ್ರಿಯಾ ಯೋಜನೆ ತಯಾರಿಸಿ ಆದಷ್ಟು ಶೀಘ್ರ ಅನುಮೋದನೆ ಪಡೆದು ಅನುಷ್ಠಾನಗೊಳಿಸುವ ಕೆಲಸಕ್ಕೆ ಅಧಿಕಾರಿಗಳು ವೇಗ ನೀಡಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ನಿರ್ದೇಶನ ನೀಡಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಸಂಜೆ ನಡೆದ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
‘ಮೈಕ್ರೋ’ದಲ್ಲಿ ಶೇ 70 ಅಭಿವೃದ್ಧಿ ಸೂಚ್ಯಂಕದ ಪ್ರಕಾರ, ಆಯಾ ತಾಲ್ಲೂಕಿನ ಶಾಸಕರಿಗೆ ಅನುದಾನ ಹಂಚಿಕೆಯಾಯಾಗುತ್ತದೆ. ಒಂದು ವಾರದೊಳಗೆ ಕ್ರಿಯಾ ಯೋಜನೆ ತಯಾರಿಸಿ ಅನುಮೋದನೆಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಕಳಿಸಬೇಕು. ‘ಮ್ಯಾಕ್ರೋ’ದಲ್ಲಿ ಜಿಲ್ಲಾಮಟ್ಟದ ಕಾಮಗಾರಿಗಳು ಜಿಲ್ಲಾ ಉಸ್ತುವಾರಿ ಸಚಿವರ ಮಾರ್ಗದರ್ಶನದಲ್ಲಿ ನಡೆಯುತ್ತವೆ. ‘ಮ್ಯಾಕ್ರೋ’ದಲ್ಲಿ ?116 ಕೋಟಿ, ಮೈಕ್ರೋದಲ್ಲಿ ?270 ಕೋಟಿ ಅನುದಾನ ಇದೆ ಎಂದು ಹೇಳಿದರು.
ಕೆಕೆಆರ್‍ಡಿಬಿಯಲ್ಲಿ ?5 ಸಾವಿರ ಕೋಟಿ ಅನುದಾನ ಲಭ್ಯವಿದೆ. ಮೊದಲ ಬಾರಿಗೆ ಬೀದರ್ ಜಿಲ್ಲೆಗೆ ಹೆಚ್ಚಿನ ಅನುದಾನ ಮೀಸಲಿಡಲಾಗಿದೆ. ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ಆಯಾ ತಾಲ್ಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು ಅನುಷ್ಠಾನ ಅಧಿಕಾರಿಗಳೊಂದಿಗೆ ಸಭೆ ನಡೆಸಿ ತಾಲ್ಲೂಕು ಸಮುದಾಯ ಆರೋಗ್ಯ ಕೇಂದ್ರ, ಪ್ರಾಥಮಿಕ ಆರೋಗ್ಯ ಕೇಂದ್ರ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಶಿಥಿಲಗೊಂಡ ಕಟ್ಟಡ, ಮೂಲಸೌಕರ್ಯಕ್ಕೆ ಪ್ರಸ್ತಾವ ಸಿದ್ಧಪಡಿಸಿ ಸಲ್ಲಿಸಬೇಕೆಂದು ತಿಳಿಸಿದರು.
ಜಿಲ್ಲೆಯಲ್ಲಿ ಅಭಿವೃದ್ದಿ ಹೊಂದಿದ ತಾಲ್ಲೂಕುಗಳನ್ನು ಹೊರತುಪಡಿಸಿದರೆ ಔರಾದ್ ತಾಲ್ಲೂಕಿಗೆ ಹೆಚ್ಚು ಅನುದಾನ ಹೋಗುತ್ತದೆ. ಸಾಮಾಜಿಕ ಹಾಗೂ ಶೈಕ್ಷಣಿಕ ವಲಯಕ್ಕೆ ಶೇ 25ರಷ್ಟು ಅನುದಾನ ಮೀಸಲಿಟ್ಟು ಪ್ರಸ್ತಾವ ಸಲ್ಲಿಸಬೇಕೆಂದು ಶಾಸಕರಿಗೆ ಹೇಳಿದ ಅವರು, ಈ ಭಾಗದಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳು ಶೀಘ್ರ ಭರ್ತಿ ಮಾಡಲಾಗುವುದು. ಬರುವ ಮಾರ್ಚ್‍ನೊಳಗೆ ಹೆಚ್ಚಿನ ಅನುದಾನ ಖರ್ಚು ಮಾಡಿ, ಅಭಿವೃದ್ಧಿ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು ಎಂದರು.
ಶಾಸಕರಾದ ಡಾ. ಸಿದ್ದಲಿಂಗಪ್ಪ ಪಾಟೀಲ, ಶರಣು ಸಲಗರ, ಡಾ.ಶೈಲೇಂದ್ರ ಕೆ. ಬೆಲ್ದಾಳೆ, ವಿಧಾನ ಪರಿಷರ್ ಸದಸ್ಯರಾದ ರಘುನಾಥರಾವ ಮಲ್ಕಾಪುರೆ, ಭೀಮರಾವ ಬಿ. ಪಾಟೀಲ, ಅರವಿಂದಕುಮಾರ ಅರಳಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಿಲ್ಪಾ ಎಂ., ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್.ಎಲ್, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ ಹಾಜರಿದ್ದರು.