ಕೆಕೆಆರ್‍ಡಿಬಿ ಅಧ್ಯಕ್ಷ ಡಾ. ಅಜಯ್ ಸಿಂಗ್‍ಗೆ ಸನ್ಮಾನ

ಬೀದರ್:ಸೆ.2: ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ. ಶಾಂತಕುಮಾರ ಮುದಾಳೆ ಅವರು ಕಲಬುರಗಿಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ನೂತನ ಅಧ್ಯಕ್ಷ ಡಾ. ಅಜಯ್ ಸಿಂಗ್ ಅವರನ್ನು ಸನ್ಮಾನಿಸಿದರು.

ಅಜಯ್ ಸಿಂಗ್ ಅವರಿಗೆ ಕಲ್ಯಾಣ ಕರ್ನಾಟಕ ಭಾಗದ ಸಂಪೂರ್ಣ ಅರಿವಿದೆ. ಅವರ ನೇತೃತ್ವದಲ್ಲಿ ಮಂಡಳಿಯಿಂದ ಈ ಭಾಗದಲ್ಲಿ ಅಭಿವೃದ್ಧಿಯ ಹೊಸ ಪರ್ವ ಆರಂಭವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕೃಷಿಕ ಸಮಾಜದ ಕಲಬುರಗಿ ಜಿಲ್ಲಾ ಅಧ್ಯಕ್ಷ ಡಾ. ಸಿದ್ರಾಮಪ್ಪ ಪಾಟೀಲ ದಂಗಾಪುರ ಹಾಗೂ ಇತರರು ಇದ್ದರು.