ಕೆಕೆಆರ್‍ಡಿಬಿ ಕಾರ್ಯದರ್ಶಿಯಾಗಿ ಅನಿರುದ್ಧ ಶ್ರವಣ್ ನೇಮಕ

ಕಲಬುರಗಿ,ನ.15-ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆ.ಕೆ.ಆರ್.ಡಿ.ಬಿ) ಕಾರ್ಯದರ್ಶಿಯಾಗಿ ಹಿರಿಯ ಐಎಎಸ್ ಅಧಿಕಾರಿ ಅನಿರುದ್ಧ ಶ್ರವಣ್ ಪಿ.ಅವರನ್ನು ಸರ್ಕಾರ ನಿಯುಕ್ತಿಗೊಳಿಸಿದೆ.
ಅನಿರುದ್ಧ ಶ್ರವಣ್ ಅವರು ಈ ಹಿಂದೆ ಕಲಬುರಗಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಹಾಗೂ ವಿಜಯನಗರ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ.