ಕೆಕೆಆರ್‍ಡಿಬಿ ಅಧ್ಯಕ್ಷರಾಗಿ ನಾಳೆ ಅಪ್ಪುಗೌಡ ಅಧಿಕಾರ ಸ್ವೀಕಾರ

ಕಲಬುರಗಿ:ಇತ್ತಿಚೆಗೆ ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ದಿ ಮಂಡಳಿಯ ಪ್ರಥಮ ಅಧ್ಯಕ್ಷರಾಗಿ ನೇಮಕವಾದ ಶಾಸಕ ದತ್ತಾತ್ರೇಯ ಪಾಟೀಲ ರೇವೂರ(ಅಪ್ಪುಗೌಡ) ಅವರು ಅ.3 ರಂದು ಬೆಳಿಗ್ಗೆ 10 ಗಂಟೆಗೆ ಅಧಿಕಾರ ಸ್ವೀಕರಿಸುವರು ಎಂದು ಬಿಜೆಪಿ ನಗರಾಧ್ಯಕ್ಷ ಸಿದ್ದಾಜಿ ಪಾಟೀಲ ತಿಳಿಸಿದ್ದಾರೆ.
ನಗರದ ಐವಾನ್ ಏ ಶಾಹಿ ಅತಿಥಿಗೃಹದ ಎದುರಿರುವ ಕೆಕೆಆರ್‍ಡಿಬಿ ಕಚೇರಿಯಲ್ಲಿ ಬೆಳಿಗ್ಗೆ 10 ಕ್ಕೆ ನಡೆಯುವ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಲಿದ್ದಾರೆ.
ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದ್ದು, ಅಭಿಮಾನಿಗಳು ಸಹಕರಿಸಬೇಕೆಂದು ಅವರು ಕೋರಿದ್ದಾರೆ.