ಕೆಕೆಎಚ್‍ಆರ್‍ಎಸಿಎಸ್: ರೂ. 50 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯ

ಬೀದರ್:ಮೇ.20: ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಹಾಗೂ ಸಾಂಸ್ಕøತಿಕ ಸಂಘದಿಂದ ಎರಡೂವರೆ ವರ್ಷದ ಅವಧಿಯಲ್ಲಿ ಬೀದರ್ ಜಿಲ್ಲೆಯಲ್ಲಿ ರೂ. 50 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ಸಂಘದ ನಿರ್ದೇಶಕ ರೇವಣಸಿದ್ದಪ್ಪ ಜಲಾದೆ ಹೇಳಿದರು.

ಕಲಬುರಗಿಯಲ್ಲಿ ನಡೆದ ಸಂಘದ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಅವರಿಗೆ ಈ ಕುರಿತು ವರದಿ ಸಲ್ಲಿಸಿದರು.

ಸಂಘವು ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ವಿವಿಧ ಚಟುವಟಿಕೆಗಳನ್ನು ಕೈಗೊಂಡಿದೆ. ಹಲವು ಕ್ಷೇತ್ರಗಳಿಗೆ ಉತ್ತೇಜನ ನೀಡಿದೆ ತಿಳಿಸಿದರು.

ಶಾಲಾ, ಕಾಲೇಜುಗಳಲ್ಲಿ ಶುದ್ಧ ನೀರಿನ ಘಟಕಗಳನ್ನು ಅಳವಡಿಸಲಾಗಿದೆ. ಎರೆ ಹುಳು ಗೊಬ್ಬರ ಘಟಕ ನಿರ್ಮಿಸಲಾಗಿದೆ. ಸಾವಯವ ಕೃಷಿ ಕುರಿತು ರೈತರಿಗೆ ತರಬೇತಿ ನೀಡಲಾಗಿದೆ. ಬೀಜ, ಸಸಿಗಳನ್ನು ವಿತರಿಸಲಾಗಿದೆ ಎಂದು ಹೇಳಿದರು.

ಯುವಜನರು, ಮಹಿಳೆಯರಿಗೆ ತರಬೇತಿ ಕೊಟ್ಟು, ಹೊಲಿಗೆ ಯಂತ್ರ ಸೇರಿದಂತೆ ಸ್ವ ಉದ್ಯೋಗ ಆರಂಭಿಸಲು ವಿವಿಧ ಪರಿಕರಗಳನ್ನು ನೀಡಲಾಗಿದೆ. ನೂರಾರು ಮಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಡಲಾಗಿದೆ ಎಂದು ತಿಳಿಸಿದರು.

ಜಿಲ್ಲೆಯ 600 ಗ್ರಾಮಗಳಲ್ಲಿ ಸಂಘದ ಚಟುವಟಿಕೆಗಳನ್ನು ನಡೆಸಲಾಗಿದೆ. ಸಂಘದ ಚಟುವಟಿಕೆಗಳಲ್ಲಿ ರೈತರು, ಯುವಜನರು ಉತ್ಸಾಹದಿಂದ ತೊಡಗಿಸಿಕೊಂಡಿದ್ದರು ಎಂದು ಹೇಳಿದರು.

ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗೆಳ್ಳಿ, ಹೆಚ್ಚುವರಿ ಕಾರ್ಯದರ್ಶಿ ಮಲ್ಲಿಕಾರ್ಜುನ ಪಾಟೀಲ ಹಾಗೂ ಸಂಘದ ನಿರ್ದೇಶಕರು ಇದ್ದರು.