ಕೆಡಿಎಫ್ ಟೂರ್ನಮೆಂಟ್‍ನಲ್ಲಿ ಸಿಯುಕೆ ಫುಟ್‍ಬಾಲ್ ತಂಡಕ್ಕೆ ಎರಡನೇ ಸ್ಥಾನ

ಕಲಬುರಗಿ:ಜ.16:ಕಲಬುರಗಿ ಜಿಲ್ಲಾ ಫುಟ್ಬಾಲ್ ಸಂಸ್ಥೆ (ಕೆಡಿಎಫ್) ಆಯೋಜಿಸಿದ್ದ ಫುಟ್ಬಾಲ್ ಪಂದ್ಯಾವಳಿಯಲ್ಲಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಫುಟ್ಬಾಲ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ಗೌರವಾನ್ವಿತ ಕುಲಪತಿಗಳಾದ ಪೆÇ್ರ.ಬಟ್ಟು ಸತ್ಯನಾರಾಯಣ, ಕುಲಸಚಿವ ಆರ್.ಆರ್.ಬಿರಾದಾರ್, ಪರೀಕ್ಷಾ ನಿಯಂತ್ರಕ ಕೋಟ ಸಾಯಿಕೃಷ್ಣ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ಎಂ.ಎಸ್.ಪಾಸೋಡಿ, ಕ್ರೀಡಾ ಸಂಯೋಜಕ ಸಾಯಿ ಅಭಿನವ ಅವರು ತಂಡದ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.