ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ ಆರೋಪಿಗೆ ನೆಟ್‌ಪರೀಕ್ಷೆಯಲ್ಲಿ ೪೬ನೇ ರ್‍ಯಾಂಕ್

ಬೆಳಗಾವಿ,ಸೆ.೧೨- ಗೋಕಾಕ್ ನಲ್ಲಿ ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದ ಆರೋಪಿಯೊಬ್ಬ ನೆಟ್ ಪರೀಕ್ಷೆಯಲ್ಲಿ ೪೬ನೇ ರ್‍ಯಾಂಕ್ ಪಡೆದಿದ್ದಾರೆ.ಕಳೆದ ಆ. ೭ರಂದು ಗೋಕಾಕ್ ನಲ್ಲಿ ನಡೆದಿದ್ದ ಕೆಪಿಟಿಸಿಎಲ್ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾಗಿದ್ದ ಇವರು ಇದೀಗ ನೆಟ್ ಪರೀಕ್ಷೆಯಲ್ಲಿ ೪೬ನೇ ರ್‍ಯಾಂಕ್ ಪಡೆದರೂ ಸಂಭ್ರಮಿಸದ ಪರಿಸ್ಥಿತಿ ಉದ್ಭವಿಸಿದೆ.
ಹುಕ್ಕೇರಿ ತಾಲೂಕಿನ ಶಿರಹಟ್ಟಿ ನಿವಾಸಿ ಆದೇಶ ನಾಗನೂರಿ ಸರ್ಕಾರಿ ಕಾಲೇಜಿನ ಅತಿಥಿ ಉಪನ್ಯಾಸಕರಾಗಿದ್ದರು. ಇವರೀಗ ರಾಜ್ಯಶಾಸ್ತ್ರ ವಿಷಯದಲ್ಲಿ ನೆಟ್ ಪರೀಕ್ಷೆ ತೇರ್ಗಡೆಯಾಗಿದ್ದಾರೆ.
ಆದರೆ, ಕೆಪಿಟಿಸಿಎಲ್ ಕಿರಿಯ ಸಹಾಯಕರ ನೇಮಕಾತಿ ಅಕ್ರಮದಲ್ಲಿ ಭಾಗಿಯಾದ ಆರೋಪ ಇವರ ಮೇಲಿದೆ. ಪರೀಕ್ಷಾ ಸಂದರ್ಭದಲ್ಲಿ ಇಬ್ಬರು ಅಭ್ಯರ್ಥಿಗಳಿಗೆ ಎಲೆಕ್ಟ್ರಾನಿಕ್ ಡಿವೈಸ್ ನೀಡಿದ್ದ ಗಂಭೀರ ಆರೋಪ ಆದೇಶ ಎದುರಿಸುತ್ತಿದ್ದಾರೆ. ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಜೈಲಿಗಟ್ಟಿದ್ದಾರೆ. ಬೆಳಗಾವಿ ಎಸ್ಪಿ ಡಾ.ಸಂಜೀವ ಪಾಟೀಲ್ ನೇತೃತ್ವದಲ್ಲಿ ತನಿಖೆ ಮುಂದುವರೆದಿದೆ.