ಕೆಪಿಸಿಸಿಯಿಂದ ಸಂಕಲ್ಪ ಸಮಾವೇಶ

ಬೆಂಗಳೂರು,ಜ.೮- ಕರ್ನಾಟಕ ಪ್ರದೇಶ ಕಾಂಗ್ರೆಸ್ ವತಿಯಿಂದ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬೆಂಗಳೂರು ವಿಭಾಗ ಮಟ್ಟದ ಸಮಾಲೋಚನೆ ಮತ್ತು ಸಂಕಲ್ಪ ಸಮಾವೇಶ ಅಯೋಜಿಸಲಾಗಿತ್ತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬ್ಲಾಕ್ ಕಾಂಗ್ರೆಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರುಗಳು ಪಕ್ಷ ಸಂಘಟನೆಗೆ ಅಗತ್ಯವಿರುವ ಎಲ್ಲ ಕ್ರಮಗಳನ್ನು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬೇಕು. ಆನಂತರ ವಿಭಾಗೀಯ ಮಟ್ಟದಲ್ಲೂ ಪಕ್ಷ ಸಂಘಟನೆಗೆ ಅಗತ್ಯವಿರುವ ಕ್ರಮಗಳ ಕುರಿತು ಪಕ್ಷ ಸಿದ್ಧತೆ ನಡೆಸಲಿದೆ ಎಂದರು.
ಕಾರ್ಯಕ್ರಮದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ್, ಕಾರ್ಯಾಧ್ಯಕ್ಷ ಸಲೀಂ ಅಹಮದ್, ಈಶ್ವರಖಂಡ್ರೆ, ಸತೀಶ್ ಜಾರಕಿಹೊಳಿ, ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಕೇಂದ್ರ ಮಾಜಿ ಸಚಿವ ಕೆ.ಹೆಚ್ ಮುನಿಯಪ್ಪ, ಕೆ. ರೆಹಮಾನ್ ಖಾನ್, ಮಾಜಿ ಸಚಿವ ರಾಮಲಿಂಗಾರೆಡ್ಡಿ, ಚೆಲುವರಾಯಸ್ವಾಮಿ, ಮಹಿಣಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಬಿ.ಎಲ್ ಶಂಕರ್, ವಿ.ಆರ್ ಸುದರ್ಶನ್, ನಾರಾಯಣಸ್ವಾಮಿ, ರಾಜ್ಯಸಭಾ ಸದಸ್ಯ ಜೆ.ಸಿ ಚಂದ್ರಶೇಖರ್ ಇದ್ದರು.