ಕೆಪಿಸಿಸಿ ಅಲ್ಪಸಂಖ್ಯಾತ ಇಲಾಖೆ : ಕಾರ್ಯದರ್ಶಿಯಾಗಿ ಸೈಯದ್ ಸುಹೀಲ್ ನೇಮಕ

ರಾಯಚೂರು.ಜು.೨೯- ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರ ಆದೇಶದ ಮೇರೆಗೆ ಅಲ್ಪಸಂಖ್ಯಾತರ ಇಲಾಖೆಗೆ ಕಾರ್ಯದರ್ಶಿಯನ್ನಾಗಿ ಸೈಯದ್ ಸುಹೀಲ್ ಅವರನ್ನು ನೇಮಕ ಮಾಡಲಾಗಿದೆ.
ಕೆಪಿಸಿಸಿ ಅಲ್ಪಸಂಖ್ಯಾತ ಇಲಾಖೆಯ ಅಧ್ಯಕ್ಷರಾದ ಕೆ.ಅಬ್ದುಲ್ ಜಬ್ಬಾರ್ ಅವರು ನೇಮಕ ಮಾಡಿ, ಆದೇಶ ಹೊರಡಿಸಿದ್ದಾರೆ. ಕೂಡಲೇ ಅಲ್ಪಸಂಖ್ಯಾತ ಇಲಾಖೆ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಪಡಿಸಲು ಶ್ರಮಿಸಬೇಕೆಂದು ಆದೇಶಿಸಿದ್ದಾರೆ.