ಕೆಪಿಸಿಸಿ ಪರಿಶಿಷ್ಟ ವರ್ಗ ವಿಭಾಗಕ್ಕೆ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಮ್.ಡಿ. ಕೀರ್ತಿ ಕುಮಾರ್

ಸಂಜೆವಾಣಿ ವಾರ್ತೆ

ಜಗಳೂರು.ಡಿ.೩೦ : ಕೆಪಿಸಿಸಿ ಪರಿಶಿಷ್ಟ ವರ್ಗ ವಿಭಾಗಕ್ಕೆ (ಎಸ್ ಟಿ ಸೆಲ್ ) ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಎಮ್.ಡಿ. ಕೀರ್ತಿ ಕುಮಾರ್  ನೇಮಕವಾಗಿದ್ದು ತಕ್ಷಣದಿಂದ ಜಾರಿಗೆ ಬರುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್ ಬೆಂಗಳೂರು ಕೆಪಿಸಿಸಿ ಕಚೇರಿಯಿಂದ ಆದೇಶ ಹೊರಡಿಸಿದ್ದಾರೆ. ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರ ಅನುಮೋದನೆ ಮೇರೆಗೆ ಕೆಪಿಸಿಸಿ ಕಾರ್ಯಧ್ಯಕ್ಷರಾದ ಸಲೀಂ ಅಹಮದ್  ಅವರು ಈ ಆದೇಶ ಹೊರಡಿಸಿದ್ದಾರೆ  ಮುಂಬರುವ ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದು ರಾಜ್ಯ ಜಿಲ್ಲಾ ವಿಧಾನ ಸಭಾ ವಾರು ಪಕ್ಷ ಸಂಘಟನೆ ಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕಾರ್ಯನಿರ್ವಹಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಹೆಚ್ಚಿನ ಸ್ಥಾನ ಬರಲು ಸಂಘಟನೆಯಲ್ಲಿ ತೊಡಗಿಸಿಕೊಳ್ಳಿ ಎಂದು  ಆದೇಶದಲ್ಲಿ ಪತ್ರದಲ್ಲಿ ತಿಳಿಸಿದ್ದಾರೆ.ಸಂಜೆವಾಣಿ ದಿನಪತ್ರಿಕೆಯ ವರದಿಗಾರರೊಂದಿಗೆ ಶಾಸಕ ಬಿ ದೇವೇಂದ್ರಪ್ಪ ಮಾತನಾಡಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಯುವಕರಿಗೆ ಹೆಚ್ಚಿನ ಪ್ರಾಧಾನ್ಯತೆ ನೀಡಲಿದೆ ತಮ್ಮ ಸ್ನಾನಗಳಿಗೆ ಅಂಟಿಕೊಳ್ಳದೆ ಸಾಮಾನ್ಯ ಕಾರ್ಯಕರ್ತರಂತೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸಂಘಟನೆಯಲ್ಲಿ ಕೆಪಿಸಿಸಿ ಎಲ್ಲಾ ವಿಭಾಗದ ಅಧ್ಯಕ್ಷರು ಕಾರ್ಯದರ್ಶಿಗಳು ಪದಾಧಿಕಾರಿಗಳು ಪಕ್ಷ ಸಂಘಟನೆಯಲ್ಲಿ ತೊಡಗಿಕೊಂಡು ಮುಂಬರುವ ಲೋಕ ಸಭಾ ಚುನಾವಣೆಯನ್ನು ಕಾಂಗ್ರೆಸ್ ಹೈಕಮಾಂಡ್  ಹಾಗೂ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ ಉಪ ಮುಖ್ಯ ಮಂತ್ರಿ ಡಿ.ಕೆ ಶಿವಕುಮಾರ್ ಸಚಿವ ಸಂಪುಟದ ಸದಸ್ಯರುಗಳ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ತಿಳಿಸಿದ್ದಾರೆ.