ಕೆಮಿಕಲ್ ಕೈಗಾರಿಕೆಯಲ್ಲಿ ಬೆಂಕಿ

ಬೀದರ್:ಆ.7:ತಾಲ್ಲೂಕಿನ ಕೊಳಾರ ಕೈಗಾರಿಕೆ ಪ್ರದೇಶದ ‘ಸಿಂಥೋ ಚಿರಾಲ್ಸ್’ ಪ್ರೈವೇಟ್ ಲಿಮಿಟೆಡ್ ಕೈಗಾರಿಕೆಯಲ್ಲಿ ಭಾನುವಾರ ಸಂಜೆ ಬೆಂಕಿ ಹೊತ್ತಿಕೊಂಡು ಉರಿದಿದೆ.

ರಾಸಾಯನಿಕ ಸಂಸ್ಕರಣ ತಯಾರಿಕೆ ವಿಭಾಗದ ಸಿಲಿಂಡರ್‍ನಲ್ಲಿ ಬೆಂಕಿ ಹೊತ್ತಿಕೊಂಡಿತು. ಬಳಿಕ ಅಗ್ನಿಶಾಮಕ ದಳದವರು ಸ್ಥಳಕ್ಕೆ ತೆರಳಿ ನಂದಿಸಿದರು.

ಘಟನೆಯಲ್ಲಿ ಯಾವುದೇ ಜೀವ ಹಾನಿ ಆಗಿಲ್ಲ’ ಎಂದು ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ತಿಳಿಸಿದ್ದಾರೆ.