
ದಾವಣಗೆರೆ.ಮಾ.೧೫: ದಾವಣಗೆರೆ, ಜಗಳೂರು ತಾಲೂಕಿನಲ್ಲಿ ನರೇಗಾ ಕಾಮಗಾರಿ ಕಡಿಮೆ ಆಗಿದೆ. ಹೆಚ್ಚು ಕಾಮಗಾರಿ ಕೈಗೊಳ್ಳುವಂತೆ ಎಂದು ಸಂಸದ ಡಾ.ಜಿ.ಎಂ. ಸಿದ್ದೇಶ್ವರ ತಿಳಿಸಿದರು. ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ ( ದಿಶಾ) ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ದಾವಣಗೆರೆ, ಜಗಳೂರು ತಾಲೂಕಿನಲ್ಲಿ ನರೇಗಾ ಕಾಮಗಾರಿ ಪ್ರಗತಿ ಹೆಚ್ಚಾಗಿ ಇಲ್ಲ. ಕಾರಣವೇನು ಎಂದು ಪ್ರಶ್ನಿಸಿದರು.ದಾವಣಗೆರೆ ಮತ್ತು ಜಗಳೂರು ತಾಲೂಕಿನ ಲ್ಲಿ ಬಹುತೇಕ ಕೆರೆಗಳು ತುಂಬಿವೆ. ಕೆರೆಗಳಲ್ಲಿ ನರೇಗಾ ಕಾಮಗಾರಿ ಕೈಗೊಳ್ಳಬೇಕು. ಕಾರ್ಮಿಕ ವಲಯದಿಂದ ಬೇಡಿಕೆ ಕಡಿಮೆ ಇದೆ. ಹಾಗಾಗಿ ಹೆಚ್ಚಿನ ಪ್ರಗತಿ ಕಾಣುತ್ತಿಲ್ಲ ಎಂದು ಸಿಇಒ ಡಾ. ಚನ್ನಪ್ಪ ತಿಳಿಸಿದರು.ದಾವಣಗೆರೆ ಜಿಲ್ಲೆಯಲ್ಲಿ ಕಳೆದ ಸಾಲಿನಂತೆ ಹತ್ತು ಲಕ್ಷ ಮಾನವ ದಿನ ಸೃಜಿಸುವ ಗುರಿ ಇದೆ. ಮುಂದಿನ ವರ್ಷಗಳಲ್ಲಿ ಇದೇ ಗುರಿ ಮುಂದುವರೆಸಲಾಗುವುದು ಎಂದು ಸಿಇಒ ತಿಳಿಸಿದರು.ಸಮಿತಿಯ ಎಸ್. ಎಸ್. ಮಂಜುನಾಥ್, ನರೇಗಾ ಕಾಮಗಾರಿಯಡಿ ಬಾಕ್ಸ್ ಚರಂಡಿ ಗೆ ಒತ್ತು ನೀಡಲಾಗುತ್ತಿದೆ. ಕೆಲವು ಕಾಮಗಾರಿ ಕಾರ್ಯಾದೇಶ ತಿರಸ್ಕರಿಸಲಾಗುತ್ತಿದೆ ಎಂದು ತಿಳಿಸಿದರು.ಶಾಸಕ ಪ್ರೊ.ಎನ್. ಲಿಂಗಣ್ಣ, ಮೇಯರ್ ವಿನಾಯಕ ಪೈಲ್ವಾನ್, ಜಿಲ್ಲಾಧಿಕಾರಿ ಶಿವಾನಂದ ಕಾಪಶಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಎ. ಚನ್ನಪ್ಪ ಇತರರು ಇದ್ದರು.