ಕೆರೆಗಳಿಗೆ ನೀರು ಹರಿಸಲು ಒತ್ತಾಯಿಸಿ ಕೆರೆಯಲ್ಲಿಯೇ ಧರಣಿ ಕುಳಿತ ರೈತರು

ತಾಳಿಕೋಟೆ:ಮೇ.22: ತಾಲೂಕಿನ ಅಸ್ಕಿ ಕೆರೆಯಲ್ಲಿ ನೂರಾರು ರೈತರು ಅಸ್ಕಿ, ಬೆಕಿನಾಳ, ಹಾಗೂ ಬೂದಿಹಾಳ ಪಿ.ಟಿ ಕೆರೆಗಳಿಗೆ ನೀರು ತುಂಬಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಯ ನೇತೃತ್ವದಲ್ಲಿ ಮಂಗಳವಾರ ಬೆಳಿಗಿನಿಂದ ಅನಿರ್ದಿಷ್ಠಾವದಿ ಸತ್ಯಾಗ್ರಹವನ್ನು ಪ್ರಾರಂಬಿಸಿದರು.
ಧರಣಿಗೂ ಮೊದಲು ಅಸ್ಕಿ ಗ್ರಾಮದ ಮುಖ್ಯ ಭಜಾರದಿಂದ ಪ್ರಾರಂಭಗೊಂಡ ಪ್ರತಿಭಟನೆಯಲ್ಲಿ ಸರ್ಕಾರದ ವಿರೂದ್ದ ಮತ್ತು ಜಿಲ್ಲಾಡಳಿ, ತಾಲೂಕಾಡಳಿತದ ವಿರೂದ್ದ ರೈತರು ವಿವಿಧ ಘೋಷಣೆಗಳನ್ನು ಹಾಕುತ್ತಾ ಅಸ್ಕಿ ಗ್ರಾಮದ ಕೆರೆಗೆ ಹೋಗಿ ಧರಣಿಯನ್ನು ಪ್ರಾರಂಬಿಸಿದರು.
ಅಸ್ಕಿ ಗ್ರಾಮದ ರೈತ ಸಂಘದ ಅಧ್ಯಕ್ಷರಾದ ಸಂಗನಗೌಡ ಬಿರಾದಾರ ಅವರು ಮಾತನಾಡಿ ಈ ವರ್ಷ ಭೀಕರ ಬರಗಾಲದ ನಿಮಿತ್ಯವಾಗಿ ಈ ಭಾಗದಲ್ಲಿ ಎಲ್ಲ ಹಳ್ಳ, ಕೆರೆಗಳು ಬತ್ತಿಹೋಗಿ ಬಾವಿ ಹಾಗೂ ಕೊಳವೆ ಬಾವಿಯಲ್ಲಿನ ನೀರು ಕಡಿಮೆಯಾಗಿ ಕೃಷಿಗೆ ನೀರಿಲ್ಲದೇ, ಜನ ಜಾನುವಾರುಗಳಿಗೆ ಕುಡಿಯಲು ಹನಿ ನೀರು ಇಲ್ಲದೇ ಪರಿತಪಿಸುವಂತಾಗಿದೆ ಕೂಡಲೇ ಕರೆಗಳಿಗೆ ನೀರು ಹರಿಸಿ ನೀರಿನ ಭವಣೆಯನ್ನು ತಪ್ಪಿಸಬೇಕೆಂದು ಒತ್ತಾಯಿಸಿದರು.
ರೈತ ಸಂಘದ ತಾಲೂಕಾ ಉಪಾಧ್ಯಕ್ಷರಾದ ಗೌಡಪ್ಪಗೌಡ ಹಳಿಮನಿ ಮಾತನಾಡಿ ಈ ವರ್ಷದಲ್ಲಿ ಜಮೀನುಗಳಲ್ಲಿ ಮನುಷ್ಯರಿಗೆ ಮತ್ತು ಧನಕರುಗಳಿಗೆ ಕುಡಿಯಲು ನೀರು ಸಿಗುತ್ತಿಲ್ಲ, ಕುಡಿಯುವ ಹನಿ ನೀರಿಗೂ ಅಲೆದಾಡುವ ಸ್ಥಿತಿ ಬಂದೊದಗಿದೆ ಸಂಬಂದಿಸಿದ ತಾಲೂಕಾ ದಂಡಾಧಿಕಾರಿಗಳಿಗೆ, ಜಿಲ್ಲಾಧಿಕಾರಿಗಳಿಗೆ, ಸಾಕಷ್ಟು ಬಾರಿ ಮನವಿ ಸಲ್ಲಿಸಿದರು ಪ್ರಯೋಜನವಾಗಿಲ್ಲ, ಕೂಡಲೇ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿ ಕರೆಗಳಿಗೆ ನೀರು ಹರಿಸಬೇಕು ಎಂದರು.
ತಾಲೂಕಾ ಅಧ್ಯಕ್ಷರಾದ ಶ್ರೀಶೈಲ ವಾಲಿಕಾರ ಅವರು ಮಾತನಾಡಿ ಕೆರೆಗಳಿಗೆ ನೀರು ಹರಿಸದಿದ್ದರೆ ಈ ಬಾಗದ ಅಸ್ಕಿ, ಬೆಕಿನಾಳ, ಬೂದಿಹಾಳ, ಜಲಪೂರ, ಬನ್ನೆಟ್ಟಿ, ನೀರಲಗಿ, ವಣಕ್ಯಾಳ ಗ್ರಾಮ ರೈತರು ಸೇರಿಕೊಂಡು ಜಿಲ್ಲಾಧಿಕಾರಿಗಳ ಕಛೇರಿ ಮುಂದೆ ಹೋರಾಟ ಮಾಡುವುದು ಅನಿವಾರ್ಯವಾಗಲಿದೆ ಎಂದರು.
ಜಿಲ್ಲಾಧ್ಯಕ್ಷರಾದ ಸಂಗಮೆಶ ಸಗರ, ಡಾ|| ಪ್ರಭುಗೌಡ ಬಿರಾದಾರ, ಅಖಿಲ ಕರ್ನಾಟಕ ರಾಜ್ಯ ಅನ್ನದಾತ ರೈತ ಸಂಘದ ಜಿಲ್ಲಾ ಯುವ ಘಟಕದ ಅಧ್ಯಕ್ಷರಾದ ಅನ್ವರ ಅವಟಿ ಅವರು ಧರಣಿಯನ್ನು ಬೆಂಬಲಿಸಿ ಮಾತನಾಡಿದರು, ಶಿವಶಂಕರ ಸಜ್ಜನ, ಲಿಂಗಣ್ಣ ನಾಯಕಲ್ ಮಾತನಾಡಿದರು.
ಅಧಿಕಾರಿಗಳ ಬೆಟ್ಟಿ : ಧರಣಿ ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿಗಳಾದ ಪವನ ಬೆಂಕಿ, ಮತ್ತು . ಸರ್ಕಲ್ ವಿನೋದ ಸಿಂದಗಿರಿ ಅವರು ಬೆಟ್ಟಿ ನೀಡಿ ಮನವಿ ಕೊಡಿ ಮೇಲಾಧಿಕಾರಿಗಳಿಗೆ ತಿಳಿಸುತ್ತೆವೆ ಎಂದರು, ಆಗ ರೈತರು ಸ್ಥಳಕ್ಕೆ ತಹಶಿಲ್ದಾರರು, ಹಾಗೂ ಸಂಬಂಧಿಸಿದ ಕೆ.ಬಿ.ಜೆ.ಎನ್.ಎಲ್ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ ಕೆರೆಗೆ ನೀರು ಹರೆಸುವವರೆಗೂ ನಾವೂ ಹೋರಾಟದಿಂದ ಹಿಂದಕ್ಕೆ ಸರಿಯುವದಿಲ್ಲಾವೆಂದರು.
ಈ ವೇಳೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಉಪಾಧ್ಯಕ್ಷರಾದ ಶರಣಗೌಡ ಬಿರಾದಾರ, ಸಂಚಾಲಕರಾದ ಮಹಿಬೂಬ ಗೊಬ್ಬರಡಗಿ, ಗ್ರಾ.ಪಂ ಉಪಾಧ್ಯಕ್ಷರಾದ ಅಯ್ಯಪ್ಪ ಮುಗಳಿ, ರಾಮನಗೌಡ ಚೌದ್ರಿ, ಮಲ್ಲಪ್ಪ ಅಂಗಡಿ, ಮುತ್ತು ಹೂಗಾರ, ಗುರನಗೌಡ ಬಿರಾದಾರ, ಮಂಜು ಪಡಶೆಟ್ಟಿ, ಮಹದೇವಪ್ಪ ಮಾದರ, ವೆಂಕಣ್ಣ ಗುತ್ಯಾಳ, ಬಸವರಾಜ ಹಡಪದ, ಶಾಂತಗೌಡ ಬಿರಾದಾರ, ಪ್ರಭುಗೌಡ ಬಿರಾದಾರ, ಪ್ರಭುಗೌಡ ಹಳಿಮನಿ, ಶಂಕರ ಮಗದಾಳ, ದೇವಿಂದ್ರ ತುರಕನಗೇರಿ, ಬೆಕಿನಾಳ ಗ್ರಾಮದ ದೇವಿಂದ್ರಪ್ಪಗೌಡ ಪಾಟೀಲ, ಶ್ರೀಶೈಲ ಸಜ್ಜನ, ಮಲ್ಲಪ್ಪ ಮುದನೂರ, ಶ್ರೀಶೈಲ ಹಿರೇಮಠ, ರಾಮನಗೌಡ ಕರಕಳ್ಳಿ, ಲಕ್ಷ್ಮಣ ಚಲವಾದಿ, ಮರಲಿಂಗಪ್ಪ ನಾಟಿಕಾರ, ಮಡಿವಾಳಪ್ಪ ಸಜ್ಜನ, ಬೂದಿಹಾಳ ಗ್ರಾಮದ ಬಸÀನಗೌಡ ಪಾಟೀಲ, ಸಂತೋಷ ಕುಳಗೇರಿ, ಭೀಮನಗೌಡ ಬಿರಾದಾರ, ಶರಣಪ್ಪ ಹಯ್ಯಾಳ, ಜಟ್ಟೆಪ್ಪ ಮಾದರ ಸೇರಿದಂತೆ ನೂರಾರು ಜನರು ಪಾಲ್ಗೊಂಡಿದ್ದರು.