ಕೆರೆಯಲ್ಲಿ ಈಜಲು ಹೋದ ಅಣ್ಣ-ತಮ್ಮ ಮುಳುಗಿ ಸಾವು

ಬೆಂಗಳೂರು, ಡಿ.9- ಕೆರೆಯಲ್ಲಿ ಈಜಲು ಹೋಗಿದ್ದ ಅಣ್ಣ-ತಮ್ಮ ಇಬ್ಬರೂ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ಮಾದನಾಯಕನಹಳ್ಳಿ ನಡೆದಿದೆ.
ಮಾದನಾಯಕನಹಳ್ಳಿ ಕೆರೆಯಲ್ಲಿ ಈಜಲು ಹೋದ ಏಕಾಕ್ಷ 13) ಹಾಗೂ ಭರತ್ ಕುಮಾರ್‌ (11)ಮೃತ ದುರ್ದೈವಿಗಳಾಗಿದ್ದಾರೆ.
ಈಜು ಬಾರದೆ ಇದ್ದರೂ ಇಬ್ಬರೂ ನಿನ್ನೆ ಕೆರೆಯಲ್ಲಿ ಈಜಲು ಹೋಗಿದ್ದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ .
ನೀರುಪಾಲದವರಿಗಾಗಿ ತಡರಾತ್ರಿಯವರೆಗೆ ಹುಡುಕಾಟ ನಡೆಸಿ ಇಂದು ಮಧ್ಯಾಹ್ನ ಹೊರತೆಗೆಯಲಾಗಿದೆ. ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.