ಕೆರೆಯಲ್ಲಿ ಮುಳುಗಿ ವಿದ್ಯಾರ್ಥಿಗಳ ಸಾವು

ವಿಜಯಪುರ.ಜೂ೧೯:ಪಟ್ಟಣ ಹೊರವಲಯದ ಚಿಕ್ಕಬಳ್ಳಾಪುರ ರಸ್ತೆಯ ಅಮಾನಿ ಕೆರೆಯಲ್ಲಿ ಶಾಲೆ ಮುಗಿಸಿಕೊಂಡು ಈಜಲು ಹೋದ ಮೂವರು ವಿದ್ಯಾರ್ಥಿಗಳು ಮುಳಗಿ ಸಾವನ್ನಪ್ಪಿರುತ್ತಾರೆ
ಪಟ್ಟಣದ ಕೆರೆಕೋಡಿ ರಸ್ತೆ ಹಾಗೂ ಶಿಡ್ಲಘಟ್ಟ ರಸ್ತೆಯಲ್ಲಿ ವಾಸವಾಗಿದ್ದ ಕಾರ್ತಿಕ್ (೧೫), ಗುರುಪ್ರಸಾದ್ (೧೬), ಧನುಷ್ (೧೦), ಮೃತ ವಿದ್ಯಾರ್ಥಿಗಳು, ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಲ್ಲಿ ಓದುತ್ತಿದ್ದರು.ಶನಿವಾರ ಶಾಲೆ ಮುಗಿಸಿಕೊಂಡು ಮನೆಗೆ ಬಂದು ಬ್ಯಾಗ್ ಗಳನ್ನು ಮನೆಯಲ್ಲಿಟ್ಟು, ಸೈಕಲ್ ಗಳಲ್ಲಿ ಹೊರಗೆ ಹೋದವರು, ಸಂಜೆಯಾದರೂ ಮನೆಗೆ ಬಂದಿರಲಿಲ್ಲ. ಮಕ್ಕಳು ಬಾರದೆ ಇರುವುದನ್ನು ಗಮನಿಸಿದ ಪೋಷಕರು ಎಲ್ಲ ಕಡೆ ಹುಡುಕಾಡಿ, ಪಟ್ಟಣದ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಭಾನುವಾರ ಬೆಳಿಗ್ಗೆ ಕೆರೆಯಲ್ಲಿ ಸೈಕಲ್ ಗಳು ಪತ್ತೆಯಾಗಿದ್ದು, ನೀರಿನಲ್ಲಿ ಮೃತದೇಹಗಳು ಪತ್ತೆಯಾಗಿವೆ. ತಕ್ಷಣ ಕಾರ್ಯಪ್ರವೃತ್ತರಾದ ಪೊಲೀಸರು, ಅಗ್ನಿಶಾಮಕ ಠಾಣೆ ಸಿಬ್ಬಂದಿ ಸಹಾಯದೊಂದಿಗೆ ಮೂರು ಮಕ್ಕಳ ಮೃತದೇಹಗಳನ್ನು ಹೊರ ತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿಕೊಟ್ಟಿದ್ದಾರೆ. ವಿಜಯಪುರ ಠಾಣೆಯಲ್ಲಿ ದೂರು ದಾಖಲಾಗಿದೆ ಎಂದು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ನಾಗರಾಜ್ ತಿಳಿಸಿದ್ದಾರೆ.ಸ್ಥಳಕ್ಕೆ ಬಂದಿದ್ದ ಮೃತ ವಿದ್ಯಾರ್ಥಿಗಳ ಪೋಷಕರ ಆಕ್ರಂದನ ಮುಗಿಲು ಮುಟ್ಟಿತ್ತು.
ಇಮೇಲ್ ನಲ್ಲಿ ಫೋಟೋ ಕಳುಹಿಸಲಾಗಿದೆಮೃತಪಟ್ಟ ವಿದ್ಯಾರ್ಥಿಗಳಾದ ಕಾರ್ತಿಕ್ ಗುರುಪ್ರಸಾದ್ ಧನುಷ್ ಅಗ್ನಿಶಾಮಕ ಸಿಬ್ಬಂದಿ ಕೆರೆಯಿಂದ ಮುಳುಗಿದ್ದ ವಿದ್ಯಾರ್ಥಿಗಳ ಶವಗಳನ್ನು ಹೊರ ತೆಗೆಯುತ್ತಿರುವುದು