ಕೆರೆಯಲ್ಲಿ ಸಾವಿರಾರು ಮೀನುಗಳ ಮಾರಣಹೋ

ಶಿವಮೊಗ್ಗ, ಡಿ. 26;  ಕಲುಷಿತ ನೀರಿನಿಂದಾಗಿ ಸಾವಿರಾರು  ಮೀನುಗಳು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಸೊರಬ ತಾಲೂಕಿನ ಉಳವಿ ಗ್ರಾಮದಲ್ಲಿ ನಡೆದಿದ್ದು   ಘಟನೆ ಬೆಳಕಿಗೆ ಬಂದಿದೆ.ಮೀನುಗಳ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಆದರೆ ಶುಂಠಿ ಸ್ವಚ್ಛಗೊಳಿಸಿದ ನೀರು ಕೆರೆಗೆ ಹರಿಸಿದ್ದರಿಂದ, ಕೆರೆ ಕಲುಷಿತಗೊಂಡಿದೆ. ಇದರಿಂದ ಮೀನುಗಳು ಸಾವನ್ನಪ್ಪಿವೆ ಎಂದು ಸ್ಥಳೀಯರು ದೂರಿದ್ದಾರೆ.
ಶುಂಠಿ ಸ್ವಚ್ಛಗೊಳಿಸುವ ನೀರು ಕೆರೆಗೆ ಬಿಡದಂತೆ ಸೂಕ್ತ ಕ್ರಮಕೈಗೊಳ್ಳಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.ಸ್ಥಳಕ್ಕೆ ಮೀನುಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿಯಿತ್ತು ಪರಿಶೀಲನೆ ನಡೆಸಿದರು. ಕೆರೆ ನೀರು ಹಾಗೂ ಮೃತ ಮೀನುಗಳ ಮಾದರಿ ಸಂಗ್ರಹಿಸಿ ಪ್ರಯೋಗಾಲಯದ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಯೋಗಾಲಯದ ವರದಿಯ ನಂತರವಷ್ಟೇ ಮೀನುಗಳ ಸಾವಿಗೆ ಸ್ಪಷ್ಟ ಕಾರಣ ತಿಳಿದು ಬರಬೇಕಾಗಿದೆ.ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.ಕೆರೆ ನೀರಿನ ಮಾದರಿ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.