ಕೆರೆ ತುಂಬಿಸುವ ಯೋಜನೆಗಳಿಗೆ ಅನುಮೋದನೆ: ಶಾಸಕ ಗುತ್ತೇದಾರ ಹರ್ಷ

ಕಲಬುರಗಿ:ಜ.11:ಆಳಂದ ತಾಲೂಕಿನ 8 ಕೆರೆಗಳನ್ನು ತುಂಬಿಸುವ ಸುಮಾರು 49.50 ಕೋಟಿ ಮೊತ್ತದ ಯೋಜನೆಗೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿರುವುದಕ್ಕೆ ಆಳಂದ ಶಾಸಕ ಸುಭಾಷ್ ಆರ್ ಗುತ್ತೇದಾರ ಹರ್ಷ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರಸ್ತುತ ಭೋರಿ ನದಿಯಿಂದ ಪೈಪಲೈನ್ ಮೂಲಕ ಜಲಾಶಯ ತುಂಬಿಸುವ ಕಾರ್ಯ ಪ್ರಗತಿಯಲ್ಲಿದ್ದು ಈ ಯೋಜನೆಯಲ್ಲಿ ಬಿಟ್ಟು ಹೋಗಿದ್ದ 8 ಕೆರೆಗಳನ್ನು ಸೇರ್ಪಡೆಗೊಳಿಸಿ ಈ ಯೋಜನೆ ಪೂರ್ಣಗೊಳಿಸಲಾಗುತ್ತಿದೆ. ಇತ್ತೀಚಿಗೆ ಬೆಳಗಾವಿ ವಿಧಾನಸಭೆ ಅಧಿವೇಶನದ ಸಮಯದಲ್ಲಿ ಜರುಗಿದ ಸಚಿವ ಸಂಪುಟ ಸಭೆಯಲ್ಲಿ ಈ ಯೋಜನೆಗೆ ಅನುಮೋದನೆ ನೀಡಲಾಗಿತ್ತು. ಮಂಗಳವಾರ ಈ ಯೋಜನೆಗೆ ಆಡಳಿತಾತ್ಮಕ ಅನುಮೋದನೆ ದೊರತಿದೆ ಎಂದು ಶಾಸಕರು ತಿಳಿಸಿದ್ದಾರೆ.

ಈ ಯೋಜನೆಗೆ ಅನುಮೋದನೆ ನೀಡಿರುವ ಸರ್ಕಾರದ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಸೇರಿದಂತೆ ಸಂಪುಟದ ಸದಸ್ಯರಿಗೆ ಶಾಸಕ ಸುಭಾಷ್ ಆರ್ ಗುತ್ತೇದಾರ ಧನ್ಯವಾದ ತಿಳಿಸಿದ್ದಾರೆ.