ಕೆರೆ ರಾಜು ಕಾಲುವೆ ಒತ್ತುವರಿ ತರವಿಗೆ ಒತ್ತಾಯ

ಕೋಲಾರ,ಜು.೧೨: ಕೋಲಾರ ಜಿಲ್ಲೆಯಲ್ಲಿ ತಮ್ಮ ಸಣ್ಣ ನೀರಾವರಿ ಇಲಾಖೆಯ ವ್ಯಾಪ್ತಿಗೆ ಬರುವ ಬಹುತೇಕ ಕೆರೆಗಳನ್ನು ಕೆಲವು ಪ್ರಭಾವಿ ವ್ಯಕ್ತಿಗಳು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ಕೆರೆ, ರಾಜಕಾಲುವೆಗಳನ್ನು ಸಹ ಒತ್ತುವರಿ ಮಾಡಿಕೊಂಡಿದ್ದಾರೆ. ಕೆರೆಗಳ ಒತ್ತುವರಿಯಿಂದಾಗಿ ಮಳೆ ಬಿದ್ದರೆ ನೀರು ಸರಾಗವಾಗಿ ಹರಿಯದೆ ರೈತರ ಜಮೀನುಗಳಿಗೆ ನೇರವಾಗಿ ನೀರು ನುಗ್ಗಿ ರೈತರ ಬೆಳೆಗಳು ನಾಶವಾಗಿ ರೈತರು ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿದ್ದಾರೆ ಎಂದು ಆರೋಪಿಸಿದರು.
ಜಿಲ್ಲೆಯಲ್ಲಿರುವ ಬಹುತೇಕ ಸಣ್ಣ ಕೆರೆಗಳು ಇಂದು ಕಣ್ಮರೆಯಾಗುತ್ತಿವೆ. ಈ ವಿಚಾರವಾಗಿ ನಮ್ಮ ಸಂಘಟನೆಯು ನಿರಂತರವಾಗಿ ಹೋರಾಟ ಮಾಡುತ್ತಾ ಬಂದಿದ್ದರೂ ಇದುವರೆವಿಗೂ ಯಾವುದೇ ರೀತಿಯಲ್ಲೂ ಪ್ರಯೋಜನವಾಗಿಲ್ಲ. ಅಧಿಕಾರಿಗಳು ನಿರ್ಲಕ್ಷ್ಯದಿಂದಾಗಿ ಇಂದು ಕೆರೆಗಳು ಕಣ್ಮರೆಯಾಗುತ್ತಿವೆ. ಬಹುತೇಕ ಕೆರೆಗಳನ್ನು ಕೆಲವು ರಿಯಲ್ ಎಸ್ಟೇಟ್ ಮಾಫಿಯಾದವರು ಭೂಕಬಳಿಕೆ ಮಾಡಿ ಕೆರೆಗಳ ಜಾಗದಲ್ಲಿ ಲೇ ಔಟ್‌ಗಳನ್ನು ನಿರ್ಮಾಣ ಮಾಡುತ್ತಿದ್ದಾರೆ.
ಕೂಡಲೇ ಈ ಎಚಾರವನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಂಡು ಕ್ರಮ ಕೈಗೊಳ್ಳಬೇಕು. ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆಯ ವತಿಯಿಂದ ತೀವ್ರ ಸ್ವರೂಪದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕೋಟಿಗಾನಹಳ್ಳಿ ಗಣೇಶ್‌ಗೌಡ, ವಿಶ್ವನಾಥಗೌಡ, ಎ.ವಿ.ಮುನೇಗೌಡ, ನಾರಾಯಣಸ್ವಾಮಿ, ನಾಗರಾಜ್,ಕೃಷ್ಣಪ್ಪ ಮುಂತಾದವರು ಭಾಗವಹಿಸಿದ್ದರು.