ಕೆಲಸದ ಸ್ಥಳದಲ್ಲಿ ಕೊವೀಡ್ ಲಸಿಕೆ: ಏ.11 ರಿಂದ ನೀಡಿಕೆ: ಸಿದ್ದತೆಗೆ ಕೇಂದ್ರದ ಸೂಚನೆ

ನವದೆಹಲಿ, ಏ.7- ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೆಲಸದ ಸ್ಥಳಗಳಲ್ಲಿ ಕೊರೋನಾ ಲಸಿಕೆ ನೀಡಲು ಕೇಂದ್ರ ಸರಕಾರ ಸಮ್ಮತಿ ನೀಡಿದೆ.

ಏಪ್ರಿಲ್ 11ರಿಂದ ಸರ್ಕಾರಿ ಮತ್ತು ಖಾಸಗಿ,ಕಚೇರಿ ಕಾರ್ಖಾನೆಗಳು ಸೇರಿದಂತೆ ಉದ್ದಿಮೆಗಳಲ್ಲಿ ಕೆಲಸ ಮಾಡುತ್ತಿರುವವರಿಗೆ ದೇಶಾದ್ಯಂತ ಲಸಿಕೆ ಹಾಕಲು ಉದ್ದೇಶಿಸಲಾಗಿದೆ. ಹೀಗಾಗಿ ಎಲ್ಲ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಲಸಿಕೆ ನೀಡಲು ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದೆ

45 ವರ್ಷ ಮೇಲ್ಪಟ್ಟವರಿಗೆ ಪ್ರತಿದಿನ 100 ಮಂದಿಗೆ ಲಸಿಕೆ ಹಾಕಲು ಉದ್ದೇಶಿಸಲಾಗಿದ್ದು ನೊಂದಾಯಿಸಿ ಕೊಂಡವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕೇಂದ್ರ ಸರ್ಕಾರ ತಿಳಿಸಿದೆ‌.

ಈ ಸಂಬಂಧ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಬರೆದಿರುವ ಪತ್ರದಲ್ಲಿ ಈ ವಿಷಯ ತಿಳಿಸಿದೆ

ದೇಶದಿಂದ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲೆಡೆ ಬೇಡಿಕೆ ಕೇಳಿಬಂದ ಹಿನ್ನೆಲೆಯಲ್ಲಿ ಕೆಲಸದ ಸ್ಥಳಗಳಲ್ಲಿ ನೀಡಲು ಕೇಂದ್ರ ಸರಕಾರ ಸಮ್ಮತಿ ಸೂಚಿಸಿದೆ.

ದೇಶದಲ್ಲಿ ಮಕ್ಕಳು ಸೇರಿದಂತೆ ಎಲ್ಲಾ ವಯೋಮಾನದವರಿಗೆ ಕೊರೋನ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದ್ದು ಹನ್ನೊಂದರಿಂದ ಸರ್ಕಾರಿ ಮತ್ತು ಖಾಸಗಿ ಕಚೇರಿ ಕಾರ್ಖಾನೆಗಳಲ್ಲಿ ಲಸಿಕೆ ನೀಡಲು ಉದ್ದೇಶಿಸಲಾಗಿದೆ