ಕೆಲಸವಿಲ್ಲದೆ ಕಳ್ಳತನಕ್ಕಿಳಿದ ಭೂಪರು ಪೊಲೀಸರು ಬೀಸಿದ ಬಲೆಗೆ ಸಿಕ್ಕರು


ಬಳ್ಳಾರಿ ನ 07 : ಕೋವಿಡ್ ಬಿಕ್ಕಟ್ಟಿನ ಹಿನ್ನೆಲೆ ಕೆಲಸ ಸಿಗದ ಕಾರಣ ಜಿಲ್ಲೆಯ ಸಿರುಗುಪ್ಪ ನಗರ ರಾಯಚೂರು ಮತ್ತು ದಾವಣಗೆರೆ ಜಿಲ್ಲೆಯ ನಾನಾ ಕಡೆಗಳಲ್ಲಿ ಕಳ್ಳತನ ಮಾಡುತ್ತಿದ್ದ ಏಳು ಜನ ಆರೋಪಿಗಳನ್ನು ಜಿಲ್ಲೆಯ ಸಿರುಗುಪ್ಪ ಪೊಲೀಸರು ಬಂಧಿಸಿದ್ದಾರೆ.
ಬೈಕ್, ಮೊಬೈಲ್ ಫೋನ್, ಒಡವೆಗಳನ್ನು ಕಳ್ಳತನ ಮಾಡುತ್ತಿದ್ದ ಹುಲೇಶ, ನಾಗರಾಜ, ಇಸ್ಮಾಯಿಲ್ ಹಾಗೂ ಮತ್ತಿತರರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಂದ 7.05 ಲಕ್ಷ ರೂ ಮೌಲ್ಯದ 16 ಮೋಟಾರ್ ಸೈಕಲ್, 5.56 ಲಕ್ಷ ರೂ ಮೌಲ್ಯದ ಚಿನ್ನಾಭರಣ, 9 ಮೊಬೈಲ್ ಫೋನ್‍ಗಳನ್ನ ವಶಪಡಿಸಿಕೊಳ್ಳಲಾಗಿದೆ. ಸಿರುಗುಪ್ಪ ನಗರದ ಬಿ.ರಾಘವೇಂದ್ರ ಎಂಬುವವರು ನೀಡಿದ ದೂರಿನ ಅನ್ವಯ ಪೊಲೀಸರು ಕಳ್ಳರ ಪತ್ತೆಗಾಗಿ ಬಲೆ ಬೀಸಿ, ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.