ಕೆಲಸ ಮಾಡಿ ಇಲ್ಲವೇ ಕಠಿಣ ಕ್ರಮ ಎದುರಿಸಿ

ಧಾರವಾಡ, ಆ.23: ಕೆಲಸದಲ್ಲಿ ನಿರ್ಲಕ್ಷ್ಯ ತೋರಿದರೆ ಯಾವುದೇ ಕಾರಣಕ್ಕೂ ತಾವು ಸಹಿಸುವುದಿಲ್ಲ, ಕೆಲಸ ಮಾಡಿ, ಇಲ್ಲವೇ ಕಠಿಣ ಕ್ರಮ ಎದುರಿಸಿ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಅವರು ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.

ಅವರು ಧಾರವಾಡದ ಜಿಲ್ಲಾಧಿಕಾರಿಗಳ ನೂತನ ಸಭಾಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಬೆಳಗಾವಿ ಕಂದಾಯ ವಿಭಾಗದ ವ್ಯಾಪ್ತಿಗೆ ಬರುವ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದ ಸಂದರ್ಭದಲ್ಲಿ ಇಲಾಖೆ ಅಧಿಕಾರಿಗಳ ಧೋರಣೆ ಕುರಿತು ಮಾತನಾಡಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ಅಧಿಕಾರಿಗಳು ಕ್ಷೇತ್ರ ಮಟ್ಟದಲ್ಲಿ ಕಾರ್ಯ ನಿರ್ವಹಿಸಬೇಕು ಹಾಗೂ ವಾಸ್ತವಿಕ ಸಂಗತಿಗಳ ಆಧಾರದ ಮೇಲೆ ಕಾರ್ಯ ನಿರ್ವಹಿಸಬೇಕು ಎಂದು ಅವರು ಹೇಳಿದರು.

ಇಲಾಖೆಯ ವಿಧ್ಯಾರ್ಥಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗೆ ಅನಾನುಕೂಲ ಆಗದಂತೆ ಎಲ್ಲಾ ರೀತಿಯ ಎಚ್ಚರಿಕೆ ವಹಿಸಬೇಕು, ಎಂದು ಅವರು ಹೇಳಿದರು.

ಗಂಗಾ ಕಲ್ಯಾಣ ಯೋಜನೆ ಅತ್ಯಂತ ಮುಖ್ಯವಾದದ್ದು, ಅದನ್ನು ಜಾರಿಗೆ ತರುವ ಕೆಲಸಕ್ಕೆ ಆದ್ಯತೆ ನೀಡಲು ಅವರು ಸೂಚಿಸಿದರು.

ಇನ್ನು ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ವಿಭಾಗೀಯ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇಲಾಖೆಯ ಕಾರ್ಯದರ್ಶಿ ತುಳಸಿ ಮದ್ದಿನೇನಿ ಹಾಗೂ ಹಿರಿಯ ಅಧಿಕಾರಿಗಳು ಈ ಸಂಧರ್ಭದಲ್ಲಿ ಹಾಜರಿದ್ದರು.