ಕೆಲಸ ಮಾಡುತ್ತಿದ್ದ ಮನೆಗೆ ಕನ್ನ ಖತರ್ನಾಕ್ ಮಹಿಳೆ ಸೆರೆ

ಬೆಂಗಳೂರು,ಜ.೮-ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಅಮೃತಹಳ್ಳಿಯ ಮೋನಿಕಾ ಬಂಧಿತ ಆರೋಪಿಯಾಗಿದ್ದಾಳೆ. ಬಂಧಿತಳಿಂದ ೨.೩೦ ಲಕ್ಷ ಮೌಲ್ಯದ ೪೦ ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ತಮ್ಮ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದಾಳೆಂದು ನೀಡಿದ ದೂರನ್ನು ಪಡೆದು ಪ್ರಕರಣ ದಾಖಲಿಸಿ ಕಾರ್ಯಾಚರಣೆ ಕೈಗೊಂಡು ಆರೋಪಿಯನ್ನು ಬಂಧಿಸಲಾಗಿದೆ ಎಂದರು.