ಕೆವಿಜಿ ಸುಳ್ಯಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಡಾ|ಕುರುಂಜಿ ಜನ್ಮದಿನಾಚರಣೆ

ಸುಳ್ಯ : ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯದ ಅಮರಶಿಲ್ಪಿ ಡಾ| ಕುರುಂಜಿ ವೆಂಕಟ್ರಮಣ ಗೌಡ ಅವರ ಹುಟ್ಟುಹಬ್ಬವನ್ನು ಸಂಘದ ಕಚೇರಿಯಲ್ಲಿ ಆಚರಿಸಲಾಯಿತು.
ಶ್ರೀ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಡಾ|ಹರಪ್ರಸಾದ್ ತುದಿಯಡ್ಕ ಉದ್ಘಾಟಿಸಿದರು. ಸಂಘದ ಗೌರವಾಧ್ಯಕ್ಷ ಡಾ|ಕೆ.ವಿ.ಚಿದಾನಂದ ಅವರು ಡಾ| ಕುರುಂಜಿಯವರನ್ನು ಸ್ಮರಿಸಿ ಅವರು ಹಾಕಿ ಕೊಟ್ಟ ಮಾರ್ಗದರ್ಶನದಲ್ಲಿ ಮುನ್ನಡೆದರೆ ಜೀವನದಲ್ಲಿ ಯಶಸ್ಸು ಸಾಧ್ಯ ಎಂದರು.
ಸಭಾಧ್ಯಕ್ಷತೆಯನ್ನು ಸೇವಾ ಸಂಘದ ಅಧ್ಯಕ್ಷ ಪಿ.ಸಿ.ಜಯರಾಮ ಅವರು ವಹಿಸಿ ಇಂದು ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗುತ್ತಿದ್ದು, ಮುಂದೆ ಜ. ೨೩ರಂದು ವಿವಿಧ ಕಾರ್ಯ ಕ್ರಮಗಳೊಂದಿಗೆ ಆಚರಿಸಲಾಗುತ್ತದೆ ಎಂದರು. ಈ ವರ್ಷ ಕೆವಿಜಿ ದಿನಾಚರಣೆಯನ್ನು ಸರಳವಾಗಿ ಆಚರಿಸಲಾಗಿದ್ದು, ಆ ಖರ್ಚಿನಲ್ಲಿ ಶ್ರೀಮತಿ ನಳಿನಿ ವಾಸುದೇವ ಆಚಾರ್ಯ ಸೂರ್ತಿಲ ಅವರಿಗೆ ಮನೆಕಟ್ಟಲು ರೂ. ೧ ಲಕ್ಷ ಮೊತ್ತದ ನೆರವು ನೀಡಲು ನಿರ್ಧರಿಸಲಾಯಿತು.
ಪೂರ್ವಾಧ್ಯಕ್ಷರುಗಳಾದ ಎನ್.ಜಯಪ್ರಕಾಶ್ ರೈ, ಎನ್.ಎ.ರಾಮಚಂದ್ರ, ದಿನೇಶ್ ಮಡಪ್ಪಾಡಿ ಉಪಸ್ಥಿತರಿದ್ದರು.