ಕೆಸಿಆರ್ ಆಸ್ಪತ್ರೆಗೆ ದಾಖಲು: ಬೆಂಬಲಿಗರಲ್ಲಿ ಆತಂಕ

ಹೈದ್ರಾಬಾದ್,ಡಿ.೮:ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ. ಚಂದ್ರಶೇಖರರಾವ್ ಕಾಲುಜಾರಿ ಬಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೈದ್ರಾಬಾದ್‌ನ ತಮ್ಮ ನಿವಾಸದಲ್ಲಿ ತಡರಾತ್ರಿ ಈ ಘಟನೆ ಸಂಭವಿಸಿದೆ. ಸೊಂಟದ ಭಾಗಕ್ಕೆ ತೀವ್ರ ಪೆಟ್ಟಾಗಿದ್ದು, ಅವರನ್ನು ಯಶೋಧ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈ ಘಟನೆ ಬೆಂಬಲಿರಲ್ಲಿ ಆತಂಕಕ್ಕೆ ಕಾರಣವಾಗಿದೆ.ಚಂದ್ರಶೇಖರರಾವ್ ಕುಸಿದು ಬಿದ್ದಿದ್ದರಿಂದ ಸೊಂಟ ಮುರಿತವಾಗಿರಬಹುದು ಎಂದು ವೈದ್ಯರು ಸಂಶತ ವ್ಯಕ್ತಪಡಿಸಿದ್ದಾರೆ. ಆರೋಗ್ಯ ತಪಾಸಣೆ ನಡೆಸಿದ ಬಳಿಕ ಅವರಗೆ ಏನಾಗಿದೆ ಎಂಬುದು ನಇಖರವಾಗಿ ತಿಳಿಯಲಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಕೆಸಿಆರ್ ಅವರು ಸೋಲನುಭವಿಸಿದ ಹಿನ್ನೆಲೆಯಲ್ಲಿ ಕಳೆದ ೩ ದಿನಗಳಿಂದ ಭೇಟಿಯಾಗುತ್ತಿದ್ದರು ಎಂದು ಹೇಳಲಾಗಿದೆ. ಕೆಸಿಆರ್ ಅವರು ೧೦ ವರ್ಷಗಳ ಕಾಲ ತೆಲಂಗಾಣ ಮುಖ್ಯಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ೧೦ ವರ್ಷಗಳ ನಂತರ ಭಾಋತ ರಾಷ್ಟ್ರ ಸಮಿತಿ ಚುನಾವಣೆಯಲ್ಲಿ ಸೋಲನುಭವಿಸಿದೆ. ಕಾಂಗ್ರೆಸ್ ತೆಲಂಗಾಣದಲ್ಲಿ ಮೊದಲ ಬಾರಿ ಅಧಿಕಾರಕ್ಕೆ ಬಂದಿದೆ. ತೆಲಂಗಾಣದ ನೂತನ ಮುಖ್ಯಮಂತ್ರಿಯಾಗಿ ರೇವಂತ್‌ರೆಡ್ಡಿ ಹಾಗು ೧೧ ಮಂದಿ ಸಚಿವರು ನಿನ್ನೆಯಷ್ಟೆ ಪ್ರಮಾಣವಚನ ಸ್ವೀಕರಿಸಿದ್ದರು.