ಕೆಸಿ ವ್ಯಾಲಿ ಯೋಜನೆ ಅನುಷ್ಠಾನಕ್ಕೆ ಆಗ್ರಹ

ಮಾಲೂರು,ಸೆ.೫- ಸಂಚಾಲಕರು ಜನಜಾಗೃತಿ ವೇದಿಕೆ ಮಾಲೂರು, ಶಾಶ್ವತ ನೀರಾವರಿ ಹೋರಾಟ ಸಮಿತಿಯ ವತಿಯಿಂದ ಬೆಂಗಳೂರಿನಿಂದ ವ್ಯರ್ಥವಾಗಿ ಹರಿದು ಹೋಗುತ್ತಿರುವ ಕೊಳಚೆ ನೀರನ್ನು ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸುವ ಕೆಸಿ ವ್ಯಾಲಿ ಯೋಜನೆಯನ್ನು ನೀರನ್ನು ಪುನರ್ ಶುದ್ದಿಕರಿಸಿ ಹರಿಸುವಂತೆ ಒತ್ತಾಯಿಸಿ ಸಂಚಾಲಕ ಡಾ.ತ್ಯಾವನಹಳ್ಳಿ ಗೋಪಾಲಗೌಡ ತಹಸೀಲ್ದ್‌ರವರಿಗೆ ಮನವಿ ಸಲ್ಲಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿದ್ದ ಅವಧಿಯಲ್ಲಿ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ವೃದ್ಧಿಸಲು ಇಲ್ಲಿನ ಸಂಘ ಸಂಸ್ಥೆಗಳ ಹೋರಾಟ ಹಾಗೂ ಜನಪ್ರತಿನಿಧಿಗಳ ಒತ್ತಡಕ್ಕೆ ಮಣಿದು ಜಿಲ್ಲೆಯ ಜನರಿಗೆ ಕುಡಿಯುವ ನೀರಿಗಾಗಿ ಹಾಗೂ ಅಂತರ್ಜಲ ವೃದ್ಧಿಸಲು ೧೪೦೦ ಕೋಟಿ ರೂಗಳ ವೆಚ್ಚದಲ್ಲಿ ಬೆಂಗಳೂರಿನಿಂದ ವ್ಯರ್ಥವಾಗಿ ಹರಿದು ಹೋಗುತ್ತಿರುವ ಕೊಳಚೆ ನೀರನ್ನು ಸಂಸ್ಕರಿಸಿ ಜಿಲ್ಲೆಯ ಕೆರೆಗಳಿಗೆ ಹರಿಸುವ ಕೆಸಿ ವ್ಯಾಲಿ ಯೋಜನೆಯನ್ನು ಅನುಷ್ಠಾನಗೊಳಿಸಿದ್ದು ಅದರಂತೆ ಪ್ರಸ್ತುತ ಜಿಲ್ಲೆಯ ಕೆರೆಗಳಿಗೆ ಎರಡು ಬಾರಿ ಶುದ್ಧೀಕರಿಸಿದ ನೀರು ಸರಬರಾಜು ಆಗುತ್ತಿದೆ ಈ ನೀರು ಸಮರ್ಪಕವಾಗಿ ಶುದ್ಧೀಕರಣವಾಗದ ಕಾರಣ ಕೊಳವೆ ಬಾವಿಗಳಲ್ಲಿ ಕಲುಷಿತ ನೀರು ಬರುತ್ತಿದೆ. ಜನರು ದನಕರುಗಳು ಕುಡಿಯಲು ಪ್ರಯೋಜನವಾಗುತ್ತಿಲ್ಲ ರೈತರು ತಮ್ಮ ತೋಟಗಳಲ್ಲಿ ಹಾಕುತ್ತಿರುವ ಬೆಳೆಗಳಿಗೆ ಹಾನಿಯಾಗಿ ರೈತರು ಕೃಷಿಯಿಂದ ನಷ್ಟವನ್ನು ಅನುಭವಿಸುತ್ತಿದ್ದಾರೆ.
ನೀರಾವರಿ ತಜ್ಞರು ಸಹ ಮೂರನೇ ಬಾರಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸದಿದ್ದರೆ ಕುರಿಯುವ ನೀರು ಕಲುಷಿತಗೊಳ್ಳಲಿದೆ ತೋಟಗಾರಿಕೆ ಬೆಳೆಗಳು ನಾಶವಾಗಿ ರೈತರು ತೊಂದರೆಗೆ ಒಳಗಾಗುವುದನ್ನು ಈಗಾಗಲೇ ತಿಳಿಸಿದ್ದಾರೆ.
ಆದ್ದರಿಂದ ಕೋಲಾರ ಜಿಲ್ಲೆಯ ರೈತರಿಗೆ ಅಂತರ್ಜಲ ವೃದ್ಧಿಗೆ ಅನುಕೂಲವಾಗುತ್ತಿರುವ ಕೆ.ಸಿ.ವ್ಯಾಲಿ ನೀರನ್ನು ಮೂರನೇ ಬಾರಿ ಶುದ್ಧೀಕರಿಸಿ ಕೆರೆಗಳಿಗೆ ಹರಿಸಲು ಒತ್ತಾಯಿಸಲಾಗುತ್ತಿದೆ ಎಂದರು.