
(ಸಂಜೆವಾಣಿ ವಾರ್ತೆ)
ಬಳ್ಳಾರಿ, ಏ.30: ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ರಾಜ್ಯ ಉಪಾಧ್ಯಕ್ಷರನ್ನಾಗಿ ಬಿ.ವಿ.ಶ್ರೀನಿವಾಸ ರೆಡ್ಡಿ ಅವರನ್ನು ನೇಮಕ ಮಾಡಿ ಪಕ್ಷದ ಸಂಸ್ಥಾಪಕ ಗಾಲಿ ಜನಾರ್ಧನರೆಡ್ಡಿ ಆದೇಶ ಹೊರಡಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ತಮಗಿರುವ ರಾಜಕೀಯ ಅನುಭವ ಹಾಗೂ ನಾಯಕತ್ವದ ಗುಣಗಳನ್ನು ಗುರುತಿಸಿ ಈ ಜವಾಬ್ದಾರಿಯನ್ನು ನೀಡಿದೆ.
ಈ ಜವಾಬ್ದಾರಿಯನ್ನು ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ನಿರ್ವಹಿಸಿ, ಪಕ್ಷವನ್ನು ಸಂಘಟಿಸಲು ತಮ್ಮನ್ನು ಸಂಪೂರ್ಣವಾಗಿ ತೊಡಗಿಸಿ ಕೊಳ್ಳುತ್ತೀರಿ ಎಂಬ ಭರವಸೆಯಿಂದ ಹಾಗೂ ಪಕ್ಷದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸುವರೆಂದು ಆಶಿಸುವೆ ಎಂದಿದ್ದಾರೆ.