
(ಸಂಜೆವಾಣಿ ಪ್ರತಿನಿಧಿಯಿಂದ)
ಬಳ್ಳಾರಿ, ಮೇ.19: ಕೆ.ಆರ್.ಪಿ.ಪಿ ಗೆ ಮತ ನೀಡಿದ ಮತದಾರರಿಗೆ ಕೆಆರ್ ಪಿಪಿ ಪಕ್ಷದ ಜಿಲ್ಲಾಧ್ಯಕ್ಚ ಜಿ. ರಾಜಶೇಖರ ಗೌಡ ಧನ್ಯವಾದ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಡೂರು, ಬಳ್ಳಾರಿ, ಸಿರುಗುಪ್ಪ ಕ್ಷೇತ್ರದಲ್ಲಿ ಸ್ಪರ್ಧಿಸಿದ ನಮ್ಮ ಅಭ್ಯರ್ಥಿಗಳಿಗೆ ಮತ ನೀಡಿದ್ದನ್ನು ಸ್ಮರಿಸಿದ ಅವರು ಸಮಯ ಅಭಾವದಿಂದ ಎಲ್ಲ ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿಲ್ಲ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟಿಸಿ, ಕಂಪ್ಲಿ ಹಾಗೂ ಬಳ್ಳಾರಿ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡಲಾಗುವುದು ಎಂದರು.
ಕಾಂಗ್ರೆಸ್ ಪಕ್ಷ ನೀಡಿದ ಗ್ಯಾರಂಟಿ ಗಳಿಂದ ರಾಜ್ಯದಲ್ಲಿ ಬಹುಮತ ಪಡೆಯಲು ಸಾಧ್ಯವಾಗಿದೆ. ಜನರಿಗೆ ನೀಡಿದ ಭರವಸೆಗಳನ್ನು ಗ್ಯಾರಂಟಿಗಳನ್ನು ಕಾಂಗ್ರೆಸ್ ಪಕ್ಷ ಈಡೇರಿಸಲಿ ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ಪಕ್ಷದ ಮುಖಂಡರಾದ ಕೆ.ಎಸ್.ದಿವಾಕರ್, ಧರಪ್ಪನಾಯಕ ಉಪಸ್ಥಿತರಿದ್ದರು.
One attachment • Scanned by Gmail