ಚಿತ್ರದುರ್ಗ.ಜೂ.೨೨: ಚಿತ್ರದುರ್ಗ ತಾಲ್ಲೂಕಿನ ಭರಮಸಾಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಡಿರಂಗ್ವನಹಳ್ಳಿ ಗ್ರಾಮ ಸಮೀಪದ ಅಮೃತಾ ಸರೋವರ ದಂಡೆಯ ಮೇಲೆ ಯೋಗ ದಿನಾಚರಣೆ ಆಚರಿಸಲಾಯಿತು.ಕೆ.ಆರ್. ಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಚಾರ್ಯ ಎಸ್. ಶಶಿಕಿರಣ್ ಅವರು ಅಂತರಾಷ್ಟೀಯ ಯೋಗ ದಿನಾಚರಣೆಯ ಕುರಿತು ಮಾತನಾಡಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳ ಕರಿಬಸಪ್ಪ, ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಶಿವಣ್ಣ, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು, ಸಿಬ್ಬಂದಿಗಳು, ಗ್ರಾಮಸ್ಥರು, ಬೋಧಕ ಬೋಧಕೇತರ ವರ್ಗದವರು ಹಾಗೂ ಶಾಲೆ ವಿದ್ಯಾರ್ಥಿಗಳು ಭಾಗವಹಿಸಿದ್ದರು