ಕೆ.ಎಫ್.ಡಿ.ಸಿ. ಕಾರ್ಮಿಕರಿಗೆ ಶೇ.೧೨ ರಷ್ಟು ಬೋನಸ್ ನೀಡಲು ನಿಗಮ ಒಪ್ಪಿಗೆ: ಶಾಸಕ ಅಂಗಾರ

ಸುಳ್ಯ, ಜ.೬- ಕರ್ನಾಟಕ ಅರಣ್ಯ ಅಅಭಿವೃದ್ಧಿ ನಿಗಮದ (ತಮಿಳು) ಕಾರ್ಮಿಕರ ಬೇಡಿಕೆಯ ಕುರಿತು ಜಿಲ್ಲೆಯ ಉಸ್ತುವಾರಿ ಸಚಿವರು ಹಾಗೂ ನಿಗಮದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಲಾಗಿದ್ದು ಶೇ.೧೨ ಬೋನಸ್ ನೀಡಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಶಾಸಕ ಎಸ್. ಅಂಗಾರ ತಿಳಿಸಿದ್ದಾರೆ.

ಅರಣ್ಯ ಸಚಿವರ ಅಧ್ಯಕ್ಷತೆಯಲ್ಲಿ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಥಳೀಯ ಶಾಸಕರಾದ ಎಸ್ ಅಂಗಾರ ಸುಳ್ಯ, ಪುತ್ತೂರು ಶಾಸಕ ಸಂಜೀವ ಮಠಂದೂರು ಮತ್ತು ನಿಗಮದ ಆಡಳಿತ ವರ್ಗ ಹಾಗೂ ಕಾರ್ಮಿಕ ಸಂಘಟನೆಯ ಮುಖಂಡರುಗಳ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ಚರ್ಚಿಸಿ ೮.೩೩% ಬೋನಸ್ ಅನ್ನು ಪುನರ್ ಪರಿಶೀಲಿಸಲು ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿ, ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಸಚಿವರ ಸೂಚನೆಯಂತೆ ೧೨% ಬೋನಸ್ ಮಂಜೂರು ಮಾಡುವಂತೆ ಸೂಚಿಸಿ ಆದೇಶಿಸಿದ್ದು, ಅರಣ್ಯ ಅಭಿವೃದ್ಧಿ ನಿಗಮದ ಆಡಳಿತ ಮಂಡಳಿಯ ಸಭೆ ನಡೆಸಿ ೧೨% ಬೋನಸ್ ನೀಡುವಂತೆ ಆಡಳಿತ ಮಂಡಳಿ ಅನುಮೋದನೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಯವರು ಆರ್ಥಿಕ ಇಲಾಖೆ ಕಾರ್ಯದರ್ಶಿಯವರಿಗೆ ಅನುದಾನ ಬಿಡುಗಡೆ ಮಾಡುವಂತೆ ಸೂಚಿನೆ ನೀಡಲಾಗಿದೆ ಎಂದು ಶಾಸಕ ಎಸ್. ಅಂಗಾರ ತಿಳಿಸಿದರು.