ಕೆ.ಎಸ್.ಆರ್.ಟಿಸಿ ಬಸ್ ಸಂಚಾರ ಸ್ಥಗಿತ; ಜಿಲ್ಲೆಯಲ್ಲಿ ಪ್ರಯಾಣಿಕರ ಪರದಾಟ!

ಶಿವಮೊಗ್ಗ, ಎ. ೭: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆ.ಎಸ್.ಆರ್.ಟಿ.ಸಿ. ನೌಕರರು ಕೆರೆ ನೀಡಿರುವ ಮುಷ್ಕರದ ಹಿನ್ನೆಲೆಯಲ್ಲಿ, ಶಿವಮೊಗ್ಗದಲ್ಲಿ ಸರ್ಕಾರಿ ಬಸ್ ಗಳ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಇದರಿಂದ ದೂರದೂರುಗಳಿಗೆ ತೆರಳುವ ಪ್ರಯಾಣಿಕರು ಪರದಾಡುವಂತಾಗಿದೆ.
ಮಂಗಳವಾರ ರಾತ್ರಿಯಿಂದಲೇ ಮುಕ್ಕಾಲಪಾಲು ಸರ್ಕಾರಿ ಬಸ್ ಗಳ ಸಂಚಾರ ಸ್ಥಗಿತಗೊಂಡಿತ್ತು. ಇದರಿಂದ ವಿವಿಧ ಊರುಗಳ ಹೋಗುವ ಪ್ರಯಾಣಿಕರು ತೀವ್ರ ತೊಂದರೆ ಎದುರಿಸುವಂತಾಯಿತು. ತಮ್ಮದಲ್ಲದ ತಪ್ಪಿಗೆ ಶಿಕ್ಷೆ ಅನುಭವಿಸುವಂತಾಯಿತು.
ತೊಂದರೆ: ಸರ್ಕಾರಿ ಬಸ್ ಸಂಚಾರ ಸ್ಥಗಿತದಿಂದ ಜಿಲ್ಲೆಯ ಹಲವು ಗ್ರಾಮೀಣ ಭಾಗಗಳ ಪ್ರಯಾಣಿಕರು ತೊಂದರೆ ಎದುರಿಸುವಂತಾಗಿದೆ. ಮತ್ತೊಂದೆಡೆ ಸರ್ಕಾರಿ ಬಸ್ ಗಳಿಗೆ ಪರ್ಯಾಯವಾಗಿ ಖಾಸಗಿ ಪ್ರಯಾಣಿಕ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ.
ಆಕ್ರೋಶ: ’ಸಕರ್?ರಿ ಹಾಗೂ ಸಾರಿಗೆ ಇಲಾಖೆ ನೌಕರರ ನಡುವಿನ ಹಗ್ಗಜಗ್ಗಾಟದಿಂದ ನಾಗರೀಕರು ತೊಂದರೆ ಅನುಭವಿಸುವಂತಾಗಿದೆ. ತಕ್ಷಣವೇ ಸಮಸ್ಯೆ ಪರಿಹರಿಸಿ, ಸಕರ್?ರಿ ಬಸ್ ಗಳ ಓಡಾಟಕ್ಕೆ ಕ್ರಮಕೈಗೊಳ್ಳಬೇಕು. ಈ ಮೂಲಕ ಪ್ರಯಾಣಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು’ ಎಂದು ಪ್ರಯಾಣಿಕರು ಒತ್ತಾಯಿಸಿದ್ದಾರೆ.
ಈ ನಡುವೆ ಶಿವಮೊಗ್ಗ ನಗರದಿಂದ ಬೆಂಗಳೂರು ಸೇರಿದಂತೆ ಕೆಲ ನಗರಗಳಿಗೆ ಖಾಸಗಿ ಬಸ್ಗಳು ಸಂಚರಿಸುತ್ತಿವೆ. ಬುಧವಾರ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣ ಮುಂಭಾಗ ಹಾಗೂ ಒಳಾವರಣದಿಂದ ಹಲವು ಖಾಸಗಿ ಬಸ್ ಗಳು ವಿವಿಧೆಡೆ ತೆರಳುತ್ತಿದ್ದುದು ಕಂಡುಬಂದಿತು. ಇದು ಪ್ರಯಾಣಿಕರಿಗೆ ಸಾಕಷ್ಟು ಅನುಕೂಲ ಕಲ್ಪಿಸಿತ್ತು.
ಪಟ್ಟು: ಆರನೇ ವೇತನ ಆಯೋಗದ ಶಿಫಾರಸ್ಸು ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಕೆಗೆ ಸಾರಿಗೆ ಇಲಾಖೆ ಸಿಬ್ಬಂದಿಗಳು ಪಟ್ಟು ಹಿಡಿದಿದ್ದಾರೆ. ಬೇಡಿಕೆ ಈಡೇರುವವರೆಗೆ ಕರ್ತವ್ಯಕ್ಕೆ ಹಾಜರಾಗದಿರುವ ನಿರ್ಧಾರ ಮಾಡಿದ್ದಾರೆ.