ಕೆ.ಎಸ್.ಐ.ಐ.ಡಿ.ಸಿ ವತಿಯಿಂದ 2 ಕೋಟಿ ದೇಣಿಗೆ

ಬೀದರ:ಮೇ.21: ಮುಖ್ಯಮಂತ್ರಿಗಳ ಕೋವಿಡ್ -19 ಪರಿಹಾರ ನಿಧಿಗೆ ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ 2.0 ಕೋಟಿ ರೂ.ಗಳ ದೇಣಿಗೆಯ ಚೆಕ್ ಅನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಹಸ್ತಾಂತರಿಸಲಾಯಿತು.

ಈ ಸಂದರ್ಭದಲ್ಲಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ರಾಮ್ ಪ್ರಸಾದ ಮನೋಹರ್, ಕಾರ್ಯನಿರ್ವಾಹಕ ನಿರ್ದೇಶಕ ಡಿ.ಪಿ.ಪ್ರಕಾಶ್, ನಿರ್ದೇಶಕ ಮಹಾದೇವ ಸ್ವಾಮಿ, ಭಾರತಿ ಮಲ್ಲಿಕಾರ್ಜುನ ಹಾಗೂ ಗಾಯತ್ರಿ ಉಪಸ್ಥಿತರಿದ್ದರು.