ಕೆ.ಕೆ.ಆರ್.ಡಿ.ಬಿ. ಅಧ್ಯಕ್ಷರ ಪ್ರವಾಸ

ಕಲಬುರಗಿ:ಮಾ.11:ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷರು ಹಾಗೂ ಜೇವರ್ಗಿ ಶಾಸಕ ಡಾ. ಅಜಯ ಧರ್ಮಸಿಂಗ್ ಅವರು ಮಾರ್ಚ್ 12 ರಂದು ಮಂಗಳವಾರ ಬೆಳಿಗ್ಗೆ 10.30 ರಿಂದ ಸಂಜೆ 4 ಗಂಟೆಯವರೆಗೆ ಜೇವರ್ಗಿ ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗವಹಿಸುವರು.
ನಂತರ ಸಂಜೆ 4.30 ಗಂಟೆಗೆ ಜೇವರ್ಗಿ ಪಟ್ಟಣದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ ಗುಂಡೂರಾವ್ ಅವರೊಂದಿಗೆ 100 ಹಾಸಿಗೆಗಳ ಸಾಮಾಥ್ರ್ಯದ ನೂತನ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಲೋಕಾರ್ಪಣೆ ಸಮಾರಂಭದಲ್ಲಿ ಭಾಗವಹಿಸುವರು.