ಕೆ.ಕೆ.ಆರ್.ಡಿ.ಬಿ. ಕಚೇರಿಯ ಎಲ್ಲಾ ವಿಭಾಗಗಳಲ್ಲಿ ಪ್ರತ್ಯೇಕವಾಗಿಸಾರ್ವಜನಿಕ ಮಾಹಿತಿ ಅಧಿಕಾರಿಗಳನ್ನು ನೇಮಿಸಿ ಆದೇಶ

ಕಲಬುರಗಿ,ಅ.25:ಕಲಬುರಗಿಯ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ ಕಾರ್ಯಾಲಯದಲ್ಲಿನ ಎಲ್ಲಾ ವಿಭಾಗಗಳಲ್ಲಿ ಪ್ರತ್ಯೇಕವಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಮೇಲ್ಮನವಿ ಪ್ರಾಧಿಕಾರಿಗಳನ್ನು ನೇಮಿಸಿ ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಕಾರ್ಯದರ್ಶಿಗಳಾದ ಎಂ. ಸುಂದರೇಶ ಬಾಬು ಅವರು ಆದೇಶ ಹೊರಡಿಸಿದ್ದಾರೆ.
ಮಾಹಿತಿ ಹಕ್ಕು ಅಧಿನಿಯಮದಡಿ ಮಾಹಿತಿ ಕೋರಿ ಸ್ವೀಕರಿಸುವ ಅರ್ಜಿಗಳನ್ನು ಸಕಾಲದಲ್ಲಿ ವಿಲೇಗೊಳಿಸುವ/ ಇತ್ಯರ್ಥಪಡಿಸುವ ದೃಷ್ಟಿಯಿಂದ ಮಂಡಳಿಯ ಕಾರ್ಯಾಲಯದಲ್ಲಿನ ಎಲ್ಲಾ ಶಾಖೆಗಳಲ್ಲಿ ಪ್ರತ್ಯೇಕವಾಗಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ಮೇಲ್ಮನವಿ ಪ್ರಾಧಿಕಾರಿಗಳನ್ನು ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ.
ಆಡಳಿತ ಶಾಖೆಗೆ ಸಂಬಂಧಿಸಿದಂತೆ ಮಂಡಳಿಯ ಅಧೀನ ಕಾರ್ಯದರ್ಶಿಯವರನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳೆಂದು ಹಾಗೂ ಉಪ ಕಾರ್ಯದರ್ಶಿ ಇವರನ್ನು ಮೇಲ್ಮನವಿ ಪ್ರಾಧಿಕಾರಿ ಎಂದು ನೇಮಸಲಾಗಿದೆ.
ಯೋಜನೆ ಶಾಖೆಗೆ ಸಂಬಂಧಿಸಿದಂತೆ ಮಂಡಳಿಯ ಉಪನಿರ್ದೇಶಕರು-1 ಇವರನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳೆಂದು ಹಾಗೂ ಅಪರ ನಿರ್ದೇಶಕರನ್ನು ಮೇಲ್ಮನವಿ ಪ್ರಾಧಿಕಾರಿ ಎಂದು ನೇಮಿಸಲಾಗಿದೆ.
ಲೆಕ್ಕ ಶಾಖೆಗೆ ಸಂಬಂಧಿಸಿದಂತೆ ಮಂಡಳಿಯ ಸಹಾಯಕ ಹಣಕಾಸು ನಿಯಂತ್ರಕರು-1 ಇವರನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳೆಂದು ಹಾಗೂ ಹಣಕಾಸು ನಿಯಂತ್ರಕರನ್ನು ಮೇಲ್ಮನವಿ ಪ್ರಾಧಿಕಾರಿ ಎಂದು ನೇಮಿಸಲಾಗಿದೆ.
ತಾಂತ್ರಿಕ ಶಾಖೆಗೆ ಸಂಬಂಧಿಸಿದಂತೆ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರರು-1 ಇವರನ್ನು ಸಾರ್ವಜನಿಕ ಮಾಹಿತಿ ಅಧಿಕಾರಿಗಳೆಂದು ಹಾಗೂ ಅಧೀಕ್ಷಕ ಅಭಿಯಂತರರು ಇವರನ್ನು ಮೇಲ್ಮನವಿ ಪ್ರಾಧಿಕಾರಿ ಎಂದು ನೇಮಿಸಲಾಗಿದೆ.