ಕೆ.ಹರೀಶ್ ಗೌಡರ 50ನೇ ಹುಟ್ಟುಹಬ್ಬ ಆಚರಣೆ

ಮೈಸೂರು,ಜು.28:- ಕಾಂಗ್ರೆಸ್ ಪಕ್ಷದ ಮುಖಂಡ ಕೆ.ಹರೀಶ್ ಗೌಡ ಅವರ 50ನೇ ಹುಟ್ಟು ಹಬ್ಬದ ಅಂಗವಾಗಿ ಜನೋಪಯೋಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದ್ದು, ಕೆ. ಹರೀಶ್ ಗೌಡರ ಸ್ನೇಹ ಬಳಗ ಹಾಗೂ ಉದ್ಯೋಗದಾತ ಸಂಸ್ಥೆಯ ಸಹಯೋಗದೊಂದಿಗೆ ಬೃಹತ್ ಉದ್ಯೋಗ ಮೇಳ ಮತ್ತು ಅಂಗವಿಕಲರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮವನ್ನು
ಮೈಸೂರಿನ ಗೋಕುಲಂನ 3ನೇ ಹಂತದಲ್ಲಿರುವ ವಿಶಾಲ ಮೈದಾನದಲ್ಲಿ ಹಮ್ಮಿಕೊಳ್ಳಲಾಗಿದೆ.
ಕಾರ್ಯಕ್ರಮದಲ್ಲಿ ಹೊಸಮಠದ ಚಿದಾನಂದಸ್ವಾಮೀಜಿ, ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಮಾಜಿ ಸಚಿವ ಎನ್ ಚಲುವರಾಯಸ್ವಾಮಿ, ಮಾಜಿ ಶಾಸಕರುಗಳಾದ ಪಿ.ವಾಸು, ಎಂ. ಕೆ. ಸೋಮಶೇಖರ್, ವಿಧಾನ ಪರಿಷತ್ ಸದಸ್ಯ ಡಾ.ಡಿ.ತಿಮ್ಮಯ್ಯ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು.