ಕೆ.ಹೆಚ್.ಬಿ ಗ್ರೀನ್ ಪಾರ್ಕನಲ್ಲಿ ನವರಾತ್ರಿ ಉತ್ಸವ

ಕಲಬುರಗಿ: ಅ.13:ನಗರದ ಆಳಂದ ರಸ್ತೆಯಲ್ಲಿರುವ ಕೆ.ಹೆಚ್.ಬಿ ಗ್ರೀನ್ ಪಾರ್ಕ ಬಡಾವಣೆಯ ದಕ್ಷಿಣ ಮುಖಿ ಆಂಜನೇಯ ದೇವಸ್ಥಾನದ ಆವರಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವೂ ಅ.14ರಿಂದ 24ರವರೆಗೆ ದಸರಾ ಉತ್ಸವವು ವಿಜೃಂಭಣೆಯಿಂದ ಜರುಗಲಿದೆ ಎಂದು ಬಡಾವಣೆಯ ಅಧ್ಯಕ್ಷ ಸಂಜೀವಕುಮಾರ ಶೆಟ್ಟಿ ತಿಳಿಸಿದ್ದಾರೆ. ಹತ್ತು ದಿನಗಳವರೆಗೆ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಕಲೆ, ಸಾಹಿತ್ಯ, ವೈಶಿಷ್ಟ್ಯಪೂರ್ಣವಾದ ಕಾರ್ಯಕ್ರಮಗಳ ಮೂಲಕ ಮೈಸೂರ ದಸರಾವನ್ನು ನೆನಪಿಸುವಂತಿರುತ್ತದೆ. ವಿಶೇಷವಾಗಿ 19ರಂದು ಖ್ಯಾತ ಹಾಸ್ಯ ಕಲಾವಿದರಿಂದ ನಗೆ ಹಬ್ಬ ಕಾರ್ಯಕ್ರಮ ನಡೆಯಲಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ದೇವಿಯ ಅನುಗ್ರಹಕ್ಕೆ ಪಾತ್ರರಾಗಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.