ಕೆ.ಹೊಸಳ್ಳಿ ಗ್ರಾಮದಲ್ಲಿ ಕೊರೊನಾ ಜಾಗೃತಿ ಕಾರ್ಯಕ್ರಮ

ಸಿಂಧನೂರು.ಮೇ.೧೫-ಕೊರೊನಾ ಸೊಂಕು ಹರಡದಂತೆ ಗ್ರಾಮ ಪಂಚಾಯತಿ ವತಿಯಿಂದ ಗ್ರಾಮದ ಎಲ್ಲಾ ವಾರ್ಡಗಳಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸ್ಯಾನಿಟೈಸರ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಕೊರೊನಾ ಬಗ್ಗೆ ಜಾಗೃತಿ ಮೂಡಿಸಿದರು.
ತಾಲ್ಲೂಕಿನ ಗುಂಜಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಕೆ.ಹೊಸಳ್ಳಿ ಗ್ರಾಮದಲ್ಲಿ ಹಲವಾರು ಜನರಿಗೆ ಕೊರೊನಾ ಕಾಣಿಸಿಕೊಂಡ ಪರಿಣಾಮವಾಗಿ ಮುಂಜಾಗ್ರತಾ ಕ್ರಮವಾಗಿ ಗ್ರಾಮ ಪಂಚಾಯತಿ ಪಿಡಿಒ ,ಸಿಬ್ಬಂದಿಗಳು, ಸಾರ್ವಜನಿಕರ ಸಹಕಾರದೊಂದಿಗೆ ಗ್ರಾಮದಲ್ಲಿ ಸ್ಯಾನಿಟೈಸರ್ ಮಾಡಲಾಯಿತು.
ರಾಜಕೀಯ ಪಕ್ಷಗಳು ಹಾಗೂ ಸರ್ಕಾರದಿಂದ ಕೊರೊನಾ ತಡೆಗಟ್ಟಲು ಸಾಧ್ಯವಿಲ್ಲ ನಮ್ಮ ವಯಕ್ತಿಕ ಸ್ವಚ್ಚತೆ ,ಗ್ರಾಮದ ಸ್ವಚ್ಛತೆ ನಮ್ಮ ಸುತ್ತಮುತ್ತಲಿನ ವಾತಾವರಣ ಸ್ವಚ್ಛವಾಗಿದ್ದರೆ ಮಾತ್ರ ಕೊರೊನಾ ಹರಡದಂತೆ ತಡೆಗಟ್ಟಲು ಸಾದ್ಯ ಎಂದು ಗ್ರಾಮ ಪಂಚಾಯತಿ ಪಿಡಿಒ ಪಂಪನಗೌಡ ಸಾರ್ವಜನಿಕರಿಗೆ ತಿಳಿಸಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಹಾಗೂ ಕ್ಯಾಂಪ್‌ಗಳಲ್ಲಿ ಸಿಬ್ಬಂದಿಗಳು ಸ್ಯಾನಿಟೈಸರ್ ಮಾಡುವ ಮೂಲಕ ಕೊರೊನಾ ಮುಕ್ತ ಗ್ರಾಮ ಪಂಚಾಯತಿ ಯನ್ನಾಗಿಸಲು ಅಧ್ಯಕ್ಷರು, ಸರ್ವ ಸದಸ್ಯರು ಪಟ ತೊಟ್ಟಿದ್ದು ಇದಕ್ಕೆ ಸಾರ್ವಜನಿಕರು ಸಹಕರಿಸಬೇಕೆಂದು ಗ್ರಾಮ ಪಂಚಾಯತಿ ಉಪಾಧ್ಯಕ್ಷರಾದ ಅಮರೇಶ ಕಲ್ಮಂಗಿ ಹೇಳಿದರು.
ಗ್ರಾಮದಲ್ಲಿ ಜನರು ಗುಂಪು ಗುಂಪಾಗಿ ಸೇರದೆ ಮಾಸ್ಕಗಳನ್ನು ಧರಿಸಿ ,ಸಾಮಾಜಿಕ ಅಂತರ ಕಾಪಾಡಬೇಕು ಕಿರಾಣಿ ಅಂಗಡಿಗಳ ಮಾಲಿಕರು ಸ್ಯಾನಿಟೈಸರ್ ಬಳಕೆ ಮಾಡಬೇಕು ಅಂಗಡಿಗಳ ಮುಂದೆ ಸಾಮಾಜಿಕ ಅಂತರ ಕಾಪಾಡುವಂತೆ ನೋಡಿಕೊಳ್ಳಬೇಕೆಂದು ಸಾರ್ವಜನಿಕ ಪ್ರಕಟಣೆ ಹೊರಡಿಸಲಾಗಿದೆ.
ಗ್ರಾಮ ಪಂಚಾಯತಿ ಸದಸ್ಯರಾದ ಅಮರೇಶ ನಾಯ್ಕೆಡಿ ,ಶಿವರಾಯಪ್ಪ, ಜಯಶ್ರೀ, ಶಿವ ಗಂಗಮ್ಮ , ಶರಣಮ್ಮ , ದೊಡ್ಡಮ್ಮ, ಸಿಬ್ಬಂದಿಗಳಾದ ವಿರೇಶ ಕಾರ್ಲಕುಂಟಿ, ಚನ್ನಪ್ಪ ವಿಶ್ವ ಕರ್ಮ ಸೇರಿದಂತೆ ಇತರರು ಸ್ಯಾನಿಟೈಸರ್ ಮಾಡುವ ಸಂದರ್ಭದಲ್ಲಿ ಹಾಜರಿದ್ದರು.