ಕೇಂದ್ರದಿಂದ ಎಲ್ಲಾ ನೆರವು: ಅಮಿತ್ ಶಾ

ನವದೆಹಲಿ,ಏ.26- ದಾಂತೇವಾಡದಲ್ಲಿ ಭದ್ರತಾ ಪಡೆಗಳ ಮೇಲೆ ಮಾವೋವಾದಿ ನಕ್ಸಲರು ನಡೆಸಿರುವ ದಾಳಿಯನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ತೀವ್ರವಾಗಿ ಖಂಡಿಸಿದ್ದಾರೆ.

ಚತ್ತೀಸ್‌ಗಢ ರಾಜ್ಯಕ್ಕೆ ಎಲ್ಲ ರೀತಿಯ ನೆರವು ನೀಡಲಾಗುವುದು.ಘಟನಾ ಸ್ಥಳಕ್ಕೆ ಹೆಚ್ಚಿನ ಭದ್ರತಾ ಸಿಬ್ಬಂದಿ‌ ನಿಯೋಜನೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಚತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರೊಂದಿಗೆ ದೂರವಾಣಿಯಲ್ಲಿ ಮಾತುಕತೆ ನಡೆಸಿದ್ದು, ನಕ್ಸಲ್ ದಾಳಿ ಬಗ್ಗೆ ತನಿಖೆ ನಡೆಸುವಂತೆ ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಜಿಲ್ಲಾ ಮೀಸಲು ಪಡೆಯ ತಂಡ ನಕ್ಸಲ್ ವಿರೋಧಿ ಕಾರ್ಯಾಚರಣೆಯ ಭದ್ರತಾ ಪಡೆಯ ಮೇಲೆ ಘಟನೆಯ ಬಗ್ಗೆ ಸಮಗ್ರ ಮಾಹಿತಿ ನೀಡುವಂತೆ ತಿಳಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಭದ್ರತಾ ಸಿಬ್ಬಂದಿ ಸಾಗುತ್ತಿದ್ದ ವಾಹನದ ಮೇಲೆ ಮಾವೋವಾದಿ ನಕ್ಸಲರು ಸುಧಾರಿತ ಸ್ಪೋಟಕ ಸ್ಫೋಟಿಸಿದ ಪರಿಣಾಮ ಈ ದುರ್ಘಟನೆ ನಡೆದಿದೆ. ಘಟನೆಯಲ್ಲಿ 10 ಜಿಲ್ಲಾ ಮೀಸಲು ಪಡೆಯ ಮತ್ತು ಓರ್ವ ಚಾಲಕ ಮೃತಪಟ್ಟಿದ್ದಾನೆ, ಘಟನಾ ಸ್ಥಳಕ್ಕೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ.